ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಪಂಚಾಯತ್ ನ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆ ಮಾ.1ರಂದು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಮಲಾ ಇವರ ಅಧ್ಯಕ್ಷತೆಯಲ್ಲಿ ಪಂಚಾಯತಿನ ನೇತ್ರಾವತಿ ಸಭಾಂಗಣದಲ್ಲಿ ಜರಗಿತು.
ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿದರು.
ಪಂಚಾಯತ್ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಗ್ರಾಮಸ್ಥರು ಹಾಜರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ಪಿ.ಸ್ವಾಗತಿಸಿದರು.
ಸಿಬ್ಬಂದಿ ಡಾ. ದೇವಿ ಪ್ರಸಾದ್ ಬೊಲ್ಮ ವರದಿ ವಾಚಿಸಿದರು. ಲೆಕ್ಕ ಸಹಾಯಕಿ ಪ್ರಮೀಳಾ ಲೆಕ್ಕ ಪತ್ರ, ಅನುಪಾಲನಾ ವರದಿ ವಾಚಿಸಿದರು.
p>