ವೇಣೂರು: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವ ಫೆ.22ರಿಂದ ಪ್ರಾರಂಭಗೊಂಡು ಮಾ.1ರಂದು ಭರತೇಶ ಸಮುದಾಯ ಭವನದಲ್ಲಿ ಸಮಾರೋಪ ಸಮಾರಂಭ ನಡೆಯಿತು.
ಕಾರ್ಯಕ್ರಮದಲ್ಲಿ ಪರಮ ಪೂಜ್ಯ 108 ಶ್ರೀ ಅಮೋಘಕೀರ್ತಿ ಮತ್ತು ಪರಮ ಪೂಜ್ಯ 108 ಶ್ರೀ ಅಮರಕೀರ್ತಿ ಮುನಿ ಮಹಾರಾಜರ, ಮೂಡಬಿದ್ರೆ ಜೈನ ಮಠದ ಡಾ. ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾ ಸ್ವಾಮಿಜಿ, ಮಾತಾಜಿ ಯವರ ದಿವ್ಯ ಉಪಸ್ಥಿತಿಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಸಮಾರಂಭದ ಅಧ್ಯಕ್ಷತೆಯಲ್ಲಿ ನಡೆಯಿತು.
ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್, ಸಮಿತಿಯ ಪ್ರಧಾನ ಕಾರ್ಯದರ್ಶಿ ವಿ. ಪ್ರವೀಣ್ ಕುಮಾರ್ ಇಂದ್ರ, ಕೋಶಾಧಿಕಾರಿ ಜಯರಾಜ್ ಕಂಬಳಿ, ಕರ್ನಾಟಕ ಸರಕಾರದ ಯೋಜನೆ ಮತ್ತು ಸಾಂಖಿಕ ಸಚಿವ ಡಿ. ಸುಧಾಕರ್, ಮಾಜಿ ಸಚಿವ ಅಭಯಚಂದ್ರ ಜೈನ್, ವಿಧಾನ ಪರಿಷತ್ ಶಾಸಕ ಕೆ.ಪ್ರತಾಪಸಿಂಹ ನಾಯಕ್, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಅಲ್ಪ ಸಂಖ್ಯಾತ ಘಟಕದ ಕಾರ್ಯದರ್ಶಿ ಮನೋಜ್ ಜೈನ್, ನಾಸಿಕಿನ ರವೀಂದ್ರ ಪಾಟೀಲ್, ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ ಎಂ ಎನ್. ರಾಜೇಂದ್ರ ಕುಮಾರ್, ಸಮಿತಿಯ ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾರ್, ಪ್ರಧಾನ ಸಂಚಾಲಕರು ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸ್ಥಾಪಕ ವಂಶಿಯ ಅರಸರು ಮತ್ತು ಸಮಿತಿಯ ಕಾರ್ಯಾಧ್ಯಕ್ಷ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ಸ್ವಾಗತಿಸಿದರು.
ಶಿಕ್ಷಕ ಅಜಿತ್ ಕುಮಾರ್ ಕೊಕ್ರಾಡಿ ಶ ಕಾರ್ಯಕ್ರಮ ನಿರೂಪಿಸಿದರು.ಬೆಳಿಗ್ಗೆ ಹಾಗೂ ಮಧ್ಯಾಹ್ನ ವಿವಿಧ ಧಾರ್ಮಿಕ ಕಾರ್ಯಕ್ರಮ, ಬಾಹುಬಲಿ ಮೂರ್ತಿಗೆ 1008 ಕಲಶಾಭಿಷೇಕ ಜರಗಿತು.