

ಧರ್ಮಸ್ಥಳ : ಬೆಳ್ತಂಗಡಿ ಬಿಜೆಪಿ ಮಂಡಲದ ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಕಳೆಂಜದ ಹರೀಶ್ ಕೊಯಿಲ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಅರಸಿನಮಕ್ಕಿ ಹೊಸ್ತೋಟದ ಗಣೇಶ್ ಕೆ ಆಯ್ಕೆಯಾಗಿದ್ದಾರೆ.
ಇವರಿರ್ವರೂ ಪಕ್ಷ ಸಂಘಟನೆಯಲ್ಲಿ ಅನೇಕ ವರ್ಷಗಳಿಂದ ಸಕ್ರಿಯರಾಗಿದ್ದು ಇದೀಗ ಪಕ್ಷ ನೀಡಿರುವ ಉನ್ನತ ಮಟ್ಟದ ಜವಾಬ್ದಾರಿ ನಿಭಾಯಿಸುವಲ್ಲಿ ಹೆಜ್ಜೆ ಇಟ್ಟಿದ್ದಾರೆ.