ಗುರುವಾಯನಕೆರೆ ತುಳುನಾಡ ದೈವಾರಾಧಕರ ಮಹಾ ಸಮಾವೇಶ ಪರ್ವ-2024ರಲ್ಲಿ ಎಕ್ಸೆಲ್ ಪ.ಪೂ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ

0

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ದೈವಕ್ಷೇತ್ರದ ಜೀರ್ಣೋದ್ಧಾರ ಮತ್ತು ಪುನರ್ ಪ್ರತಿಷ್ಠಾ ಮಹೋತ್ಸವದ ಸಂದರ್ಭದಲ್ಲಿ ನಡೆಯುತ್ತಿರುವ ತುಳುನಾಡ ದೈವಾರಾಧಕರ ಮಹಾ ಸಮಾವೇಶ ಪರ್ವ 2024ರಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು.

ಶಾಸ್ತ್ರೀಯ, ಜಾನಪದೀಯ ನೃತ್ಯಗಳೊಂದಿಗೆ, ಹಾಡು, ನಾಟಕಗಳನ್ನು ಒಳಗೊಂಡ ಎಕ್ಸೆಲ್ ಕಲಾ ವೈಭವ ಪ್ರೇಕ್ಷಕರ ಮನ ಸೂರೆಗೊಂಡಿತು.ಸಾಂಸ್ಕೃತಿಕ ಕಾರ್ಯಕ್ರಮಗಳ ಬಳಿಕ ವಿದ್ಯಾರ್ಥಿಗಳನ್ನು ಪರ್ವ-2024ರ ಸಂಚಾಲಕರಾದ ಸಂಪತ್ ಬಿ ಸುವರ್ಣ ಮತ್ತು ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ರಾದ ವಿಶ್ವೇಶ ಕಿಣಿ ಗೌರವಿಸಿದರು.

ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರಾದ ಡಾ.ನವೀನ್ ಕುಮಾರ್ ಮರಿಕೆ, ಕ್ಯಾಂಪಸ್ ಮ್ಯಾನೇಜರ್ ಶಾಂತಿರಾಜ್ ಜೈನ್, ಆಡಳಿತ ಮಂಡಳಿಯ ಸಹನಾ ಜೈನ್, ಪ್ರಾಧ್ಯಾಪಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here