Site icon Suddi Belthangady

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಲ್ಲಿ : ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಿಧಾನಸಭಾ ಶಾಸಕ ಹರೀಶ್ ಪೂಂಜಾ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಬಿ.ಕೆ ಧನಂಜಯ್ ರಾವ್, ಕಾರ್ಯದರ್ಶಿ ದಾಸಪ್ಪ ಗೌಡ, ದಿನೇಶ್ ಗೌಡ ದಿಡುಪೆ, ಮಹಿಳಾ ಸಮಿತಿಯ ಜ್ಯೋತಿ ವಿಠಲ ಗೌಡ ಕಿಲ್ಲೂರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇದೇ ಮಾರ್ಚ್ 20ರಿಂದ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ ಎಂದು ಆಡಳಿತ ಸಮಿತಿ ತಿಳಿಸಿದೆ.

Exit mobile version