ನ್ಯಾಯತರ್ಪು : ರಕ್ತೇಶ್ವರಿ ಪದವು ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನ ಮಾ.3ರಂದು ನಡೆಯಿತು.
ಕಳಿಯ ಗ್ರಾಮ ಪಂಚಾಯತ್ ಸದಸ್ಯ ವಿಜಯ ಕುಮಾರ್ ಕೆ. ಮಕ್ಕಳಿಗೆ ಪೋಲಿಯೋ ತಡೆಗಟ್ಟುವ 2 ಹನಿ ಹಾಕುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ರಕ್ತೇಶ್ವರಿಪದವು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ನಾಗವೇಣಿ ಕೆ.ಎಸ್. ನ್ಯಾಯತರ್ಪು ಆಶಾ ಕಾರ್ಯಕರ್ತೆ ಶಶಿಕಲಾ ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು.