Site icon Suddi Belthangady

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಮಚ್ಚಿನ: ಪ್ರಾಥಮಿಕ ಆರೋಗ್ಯ ಕೇಂದ್ರ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ ರವರು ಮಗುವಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವುದರ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಶುಶ್ರೂಷಾಣಾಧಿಕಾರಿ ಲಿಸ್ಸಿ, ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಾಯಕಿ ಲೋಲಾಕ್ಷಿ, ನಿಶ್ಮಿತ, ಆಶಾ ಕಾರ್ಯಕರ್ತೆಯರು, ಅಂಗನವಾಡಿಗಳ ಕಾರ್ಯಕರ್ತೆಯರು ಹಾಗೂ ಮಕ್ಕಳು ಮತ್ತು ಪೋಷಕರು ಉಪಸ್ಥಿತರಿದ್ದರು.

ಮಚ್ಚಿನ ಆರೋಗ್ಯ ಕೇಂದ್ರಕ್ಕೆ ಸಂಬಂಧಪಟ್ಟ ಗ್ರಾಮಗಳ ಒಟ್ಟು 1598 ಮಕ್ಕಳಿಗೆ ಲಸಿಕೆ ನೀಡಲಾಯಿತು.

Exit mobile version