ಕಳೆಂಜ ದ್ವಿತೀಯ ಸುತ್ತಿನ ಗ್ರಾಮಸಭೆ

0

ಕಳೆಂಜ: ಕಳೆಂಜ ಗ್ರಾಮ ಪಂಚಾಯತ್ ನ ಗ್ರಾಮ ಸಭೆಯು ಕಾಯರ್ತಡ್ಕ ದ.ಕ.ಜಿ.ಪ.ಹಿ.ಪ್ರಾ.ಶಾಲೆಯಲ್ಲಿ ಮಾ.4ರಂದು ನೋಡೆಲ್ ಅಧಿಕಾರಿಯಾಗಿ ಆಗಮಿಸಿದ ಪಶುವೈದ್ಯಧಿಕಾರಿ ಡಾ.ವಿಶ್ವನಾಥ್ ಸಿ.ಏನ್ ರವರ ನೇತೃತ್ವದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷೆ ಗಿರಿಜಾ ರವರು ವಹಿಸಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹೊನ್ನಮ್ಮ ರವರು ವಾರ್ಷಿಕ ವರದಿ ಮಂಡಿಸಿದರು. ಜಮಾ ಖರ್ಚು ವಿವರವನ್ನು ಬಿಲ್ ಕಲೆಕ್ಟರ್ ರಾಜೇಶ್ ಶೆಟ್ಟಿ ಮಂಡಿಸಿದರು.

ವೇದಿಕೆಯಲ್ಲಿ ಪಂಚಾಯತ್ ಕಾರ್ಯದರ್ಶಿ ಹೊನ್ನಪ್ಪ ಗೌಡ, ಉಪಾಧ್ಯಕ್ಷ ಮಂಜುನಾಥ ಗೌಡ ಹಾರಿತ್ತ ಕಜೆ, ಪಂಚಾಯತ್ ಸದಸ್ಯರು, ಇಲಾಖೆ ಅಧಿಕಾರಿಗಳು, ಪಂಚಾಯತ್ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here