Site icon Suddi Belthangady

ಮೇಲಂತಬೆಟ್ಟು ಗ್ರಾ.ಪಂ ನ ದ್ವಿತೀಯ ಸುತ್ತಿನ ಗ್ರಾಮಸಭೆ

ಮೇಲಂತಬೆಟ್ಟು: ಮೇಲಂತಬೆಟ್ಟು ಗ್ರಾಮ ಪಂಚಾಯತ್ ನ 2023-24ನೇ ಸಾಲಿನ ದ್ವೀತಿಯ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಉಪಾಧ್ಯಕ್ಷ ಲೋಕನಾಥ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಮಾ.5ರಂದು ಮುಂಡೂರು ದ.ಕ.ಜಿ.ಪಂ.ಸ.ಹಿ.ಪ್ರಾ ಶಾಲೆಯಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿ ರತ್ನಾವತಿ ಭಾಗವಹಿಸಿ ಗ್ರಾಮ ಸಭೆಯನ್ನು ಮುನ್ನಡೆಸಿದರು.

ಪಂಚಾಯತ್ ಗ್ರಾಮ ಪಂಚಾಯತ್ ಸದಸ್ಯರು ಇಲಾಖಾ ಅಧಿಕಾರಿಗಳು ಭಾಗವಹಿಸಿ ಮಾಹಿತಿ ನೀಡಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೀತಾ ಆರ್ ಸಾಲಿಯಾನ್, ಕಾರ್ಯದರ್ಶಿ ನಿರ್ಮಲ್ ಕುಮಾರ್ ಕಳೆದ ಬಾರಿಯ ಅನುಪಾಲನಾ ವರದಿ ಮತ್ತು ವಾರ್ಡ್ ಸಭೆಯ ಬೇಡಿಕೆಗಳ ಪಟ್ಟಿ, ಲೆಕ್ಕ ಪತ್ರ ಮಂಡಿಸಿದರು.

ಗ್ರಾಮ ಸಭೆಯಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಭಾಗವಹಿಸಿದ್ದರು.

ಸಿಬ್ಬಂದಿ ವರ್ಗದವರು ಸಹಕರಿಸಿದರು.

Exit mobile version