ಬಜೆಟ್‌ನಲ್ಲಿ ಜಿಲ್ಲೆಗೆ ಶೂನ್ಯ ಕೊಡುಗೆ: ವಿ.ಪ. ಸದಸ್ಯ ಪ್ರತಾಪ್‌ಸಿಂಹ ನಾಯಕ್- ಪತ್ರಿಕಾಗೋಷ್ಠಿ

0

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆ ತೆರೆಗೆ ಪಾವತಿಯಲ್ಲಿ ಎರಡನೇ ಸ್ಥಾನದಲ್ಲಿದೆ.

ಈ ಭಾರಿಯ ಬಜೆಟ್‌ನಲ್ಲಿ ರಾಜ್ಯ ಸರಕಾರ ಜಿಲ್ಲೆಗೆ ಶೂನ್ಯ ಕೊಡುಗೆ ನೀಡಿದೆ.ರೈತ ವಿದ್ಯಾನಿಧಿಯನ್ನು ನಿಲ್ಲಿಸಿದೆ.

ದೇವಸ್ಥಾನದ ಹುಂಡಿಯಿಂದ ಹಣ ತೆಗೆಯುವ ಮಟ್ಟದಲ್ಲಿ ರಾಜ್ಯ ಸರಕಾರವಿದೆ.

ರಾಜ್ಯದ ಜನತೆಗೆ ಶೂನ್ಯ ಅಭಿವೃದ್ಧಿ ಜೊತೆಗೆ, ಅನ್ಯಾಯ ಮಾಡುತ್ತಿದೆ.

ಕಳೆದ 10 ವರ್ಷದಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 2 ಲಕ್ಷ 78 ಸಾವಿರ ರೂಪಾಯಿ 854 ಕೋಟಿ ಹಣವನ್ನು ಬಿಡುಗಡೆ ಮಾಡಿದೆ.

ಆದರೆ ಕಾಂಗ್ರೆಸ್ ಕೇಂದ್ರ ಅನ್ಯಾಯ ಮಾಡಿದೆ ಎಂದು ಹೇಳುತ್ತಿದೆ ಎಂದು ವಿ.ಪ.ಸದಸ್ಯ ಪ್ರತಾಪ್‌ಸಿಂಹ ನಾಯಕ್ ಹೇಳಿದರು.

ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ಮಾ.5ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಭಾಜಪಾ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here