Site icon Suddi Belthangady

ಬೆಳಾಲು ಗ್ರಾ.ಪಂ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

ಬೆಳಾಲು: ಬೆಳಾಲು ಗ್ರಾಮ ಪಂಚಾಯತ್ ನ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆ ಮಾ.6ರಂದು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ ರವರ ಅಧ್ಯಕ್ಷತೆಯಲ್ಲಿ ಪಂಚಾಯತಿನ ಸಭಾಂಗಣದಲ್ಲಿ ಜರಗಿತು.

ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯಪಾಲ ಅಭಿಯಂತರ ನಿತಿನ್ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿದರು.

ಪಂಚಾಯತ್ ಉಪಾಧ್ಯಕ್ಷೆ ಗೀತಾ, ಪಂಚಾಯತ್ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಗ್ರಾಮಸ್ಥರು ಹಾಜರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲಕ್ಹ್ಮೀಬಾಯಿ ಹೆಚ್ ಸ್ವಾಗತಿಸಿ, ಅನುಪಾಲನಾ ವರದಿ ವಾಚಿಸಿದರು.

ಬಳಿಕ ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.

Exit mobile version