ಬೆಳ್ತಂಗಡಿ: ಮಾ.9ರಂದು ಶನಿವಾರ ಪೂರ್ವಾಹ್ನ ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿಯಮ್ಮ ಸಭಾಂಗಣದಲ್ಲಿ ನಡೆಯಲಿರುವ ಸರ್ಕಾರದ ಪಂಚ ಗ್ಯಾರಂಟಿಗಳ ಫಲಾನುಭವಿಗಳ ಸಮಾವೇಶಕ್ಕೆ ಫಲಾನುಭವಿಗಳಿಗೆ ಉಚಿತವಾಗಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ.
ಪ್ರತೀ ಗ್ರಾಮ ಪಂಚಾಯತಿಗೆ ಬಸ್ಸುಗಳನ್ನು ಒದಗಿಸಲಾಗಿದ್ದು ಮಾರ್ಗಸೂಚಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
ಅಂದು ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಗ್ರಾಮ ಪಂಚಾಯಿತಿಗಳಿಂದ ಬಸ್ಸುಗಳು ಹೊರಡಲಿದ್ದು ಸಮಾವೇಶ ಮುಗಿದ ಬಳಿಕ ಫಲಾನುಭವಿಗಳನ್ನು ವಾಪಾಸು ಕರೆದುಕೊಂಡು ಹೋಗುವ ವ್ಯವಸ್ಥೆ ಮಾಡಲಾಗಿದೆ.
ಹೆಚ್ಚಿನ ವಿವರಗಳಿಗೆ ಆಯಾ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ/ಕಾರ್ಯದರ್ಶಿ ಅಥವಾ ಅಂಗನವಾಡಿ ಕಾರ್ಯಕರ್ತೆಯವರನ್ನು ಸಂಪರ್ಕಿಸಬಹುದೆಂದು ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ಎಸ್ ತಿಳಿಸಿದ್ದಾರೆ.