Site icon Suddi Belthangady

ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ಸ್ವಾಮಿ ದೇವಸ್ಥಾನದ ಜೀರ್ಣೋದ್ದಾರದ ಪೂರ್ವಭಾವಿ ಸಭೆ-ಸಮಿತಿ ರಚನೆ

ಉಜಿರೆ: ಇಲ್ಲಿಯ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ಸ್ವಾಮಿ ಮತ್ತು ಶ್ರೀ ಉಮಾಮಹೇಶ್ವರ ಸ್ವಾಮಿ ದೇವಸ್ಥಾನ ಇದರ ಜೀರ್ಣೋದ್ದಾರದ ಪೂರ್ವಭಾವಿ ಸಭೆ ಮಾ.7ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಮೋಕ್ತೆಸರ ಶರತ್ ಕೃಷ್ಣ ಪಡುವೆಟನ್ನಾರ ಮಾರ್ಗದರ್ಶನದಲ್ಲಿ ನಡೆಯಿತು.

ಅವರು ಮಾತನಾಡಿ ಪ್ರಾಚೀನ ಇತಿಹಾಸ ಇರುವ ಪೆರ್ಲದ ಈ ಪುರಾತನ ಕ್ಷೇತ್ರದ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ.ಸನಾತನ ಹಿಂದೂ ಧರ್ಮದಲ್ಲಿ ದೇವಸ್ಥಾನಗಳಿಗೆ ಪ್ರಾಮುಖ್ಯತೆ ಇದೆ ಇದು ಶಕ್ತಿಯನ್ನು ಕೊಡುವ ಕೇಂದ್ರ.ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗಳಲ್ಲಿ ಪಾಲ್ಗೊಳ್ಳುವುದು ಒಂದು ಪುಣ್ಯದ ಕಾರ್ಯ ಎಲ್ಲರೂ ಭಕ್ತರಾಗಿ ಭಾಗವಹಿಸ ಬೇಕು ಎಂದರು.

ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಭಾಗವಹಿಸಿ ಮಾತನಾಡಿ ಊರಿನ ದೇವಸ್ಥಾನದ ಜೀರ್ಣೋದ್ದಾರ, ಬ್ರಹ್ಮಕಲಶೋತ್ಸವ ಕಾರ್ಯಗಳಲ್ಲಿ ಭಾಗವಹಿಸುವುದು ಪುಣ್ಯದ ಕೆಲಸ, ಸಂಕಲ್ಪದೊಂದಿಗೆ ದೇವಸ್ಥಾನ ಅಭಿವೃದ್ಧಿಯಲ್ಲಿ ಪಾಲ್ಗೊಂಡು ಇಲ್ಲಿ ಶ್ರದ್ದಾ ಕೇಂದ್ರವಾಗಿ ಮಾಡಿ ಸಂಸ್ಕಾರ ದೊರೆಯಲು ಸಾಧ್ಯ ಎಂದರು.

ಸಭೆಯಲ್ಲಿ ಕೃಷ್ಣ ಒಪ್ಪಂತಾಯ, ವೇಣುಗೋಪಾಲ, ಬೆಳ್ತಂಗಡಿ ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ, ಉಜಿರೆ ವರ್ತಕರ ಸಂಘದ ಅಧ್ಯಕ್ಷ ಅರವಿಂದ ಕಾರಂತ್, ರಘುರಾಮ ಶೆಟ್ಟಿ, ತುಕಾರಾಮ ಎಂ. ಆನೆಕೊಡಂಗೆ, ಉಜಿರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶ್ರೀಧರ ಪೂಜಾರಿ, ಇಂಜಿನಿಯರ್ ಗಣೇಶ್, ಪಂಚಾಯತ್ ಸದಸ್ಯರಾದ ಮಂಜುನಾಥ್, ಗುರುಪ್ರಸಾದ್ ಕೋಟ್ಯಾನ್, ಪೆರ್ಲ ಬೈಲಿನ ಗ್ರಾಮಸ್ಥರು ಹಾಜರಿದ್ದರು. ಉಜಿರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿಕುಮಾರ್ ಬರೆಮೇಲು ಪ್ರಸ್ತಾವನೆ ಗೈದು ಸ್ವಾಗತಿಸಿದರು.

ದೇವಸ್ಥಾನದ ಟ್ರಸ್ಟ್ ಜತೆ ಕಾರ್ಯದರ್ಶಿ ಸುನಂದಾ ನಿರೂಪಿಸಿ ಪ್ರಶಾಂತ್ ನಾಯ್ಕ ವಂದಿಸಿದರು.

ದೇವಸ್ಥಾನದ ಮುಂದಿನ ಜೀರ್ಣೋದ್ದಾರ ಕಾರ್ಯಗಳ ಬಗ್ಗೆ ಸಮಾಲೋಚನೆ ನಡೆದು ಜೀರ್ಣೋದ್ದಾರ ಸಮಿತಿಯನ್ನು ರಚಿಸಲಾಯಿತು.

Exit mobile version