ಹೊಸಂಗಡಿ: ಹೊಸಂಗಡಿ ಗ್ರಾಮ ಪಂಚಾಯತ್ ನಲ್ಲಿ ವಿಕಲ ಚೇತನರ ಸಮನ್ವಯ ಗ್ರಾಮ ಸಭೆಯನ್ನು ಮಾ.07ರಂದು ಆಯೋಜಿಸಲಾಗಿತ್ತು.
ಈ ಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಜಗದೀಶ್ ಹೆಗ್ಡೆ, ಉಪಾಧ್ಯಕ್ಷೆ ಶಾಂತ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ, ಕಾರ್ಯದರ್ಶಿ ಕಾಂತಪ್ಪ, ಪಂಚಾಯತ್ ಸದಸ್ಯರು, ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ಸೌಮ್ಯ, CHO ಸುಕ್ಷಿತಾ, PHCO ರಕ್ಷಿತಾ, ಜಲಜೀವನ್ ಮಿಷನ್ ನ ಸಮುದಾಯ ಅಧಿಕಾರಿ ವಿಶಾಲಾಕ್ಷಿ ಆಶಾಕಾರ್ಯಕರ್ತೆಯರು ಗ್ರಂಥಾಲಯ ಮೇಲ್ವಿಚಾರಕರು, ಪಂಚಾಯತ್ ಸಿಬ್ಬಂದಿಗಳು, ಹಾಗೂ ವಿಶೇಷ ಚೇತನರು ಮತ್ತು ಅವರ ಪೋಷಕರು ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಯವರು ವಿಶೇಷ ಚೇತನರ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.
ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ಸೌಮ್ಯರವರು ವರದಿಮಂಡಿಸಿದರು. PHCO ರವರಾದ ರಕ್ಷಿತರವರು ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು.ನಂತರ ವಿಶೇಷ ಚೇತನ ಫಲಾನುಭವಿಗಳಿಗೆ 6 ಮನೆಗಳಿಗೆ ಸೋಲಾರ್ ಸೌಲಭ್ಯ ಮತ್ತು 9 ಜನರಿಗೆ ಸಹಾಯಧನ ಚೆಕ್ ನ್ನು ವಿತರಿಸಲಾಯಿತು.
ಕಾರ್ಯಕ್ರಮವನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ಸೌಮ್ಯರವರು ಧನ್ಯವಾದ ನೀಡುವುದರ ಮೂಲಕ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.