ಇಳಂತಿಲ ಶಾಲಾ ಕೊಠಡಿಯ ಬೀಗ ಮುರಿದು ಒಳ ನುಗ್ಗಿದ ಕಳ್ಳರು- ನಗದು ಕಳವು

0

ಇಳಂತಿಲ: ಇಳಂತಿಲ ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ನುಗ್ಗಿದ ಕಳ್ಳರು ನಗದು ಹಣ ದೋಚಿದ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.

ಶಾಲೆಯ ಬಾಗಿಲ ಚಿಲಕವನ್ನು ಮೀಟಿ ಒಳನುಗ್ಗಿದ ಕಳ್ಳರು ಶಾಲಾ ಕಚೇರಿಯಲ್ಲಿದ್ದ ಕಪಾಟಿನ ಬಾಗಿಲು ಮುರಿದು ಕಪಾಟಿನಲ್ಲಿದ್ದ 1,500 ರೂಪಾಯಿ ನಗದು ಹಣವನ್ನು ಕದ್ದೊಯ್ದಿದ್ದಾರೆ ಎಂದು ಶಾಲಾ ಮುಖ್ಯ ಶಿಕ್ಷಕಿ ತಾರಮಣಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here