ಬೆಳಾಲು: ಬೆಳಾಲು ಗ್ರಾಮ ಪಂಚಾಯತಿನಲ್ಲಿ ಮಾ.7ರಂದು ನಾಗಾಂಬಿಕ ಸಂಜೀವಿನಿ ಒಕ್ಕೂಟ, ಬೆಳಾಲು ಹಾಗೂ ಸ್ತ್ರೀ ಶಕ್ತಿ ಗೊಂಚಲು ಇದರ ಸಹಯೋಗದಲ್ಲಿ ಮಹಿಳಾ ದಿನಾಚರಣೆಯನ್ನು ನಡೆಸಲಾಯಿತು.
ಅಧ್ಯಕ್ಷತೆಯನ್ನು ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ ವಹಿಸಿಕೊಂಡು ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಂಡು ಸಮಾಜದಲ್ಲಿ ಉತ್ತಮ ಸ್ಥಾನ ಮಾನವನ್ನು ಗಳಿಸಬೇಕೆಂದು ತಿಳಿಸಿದರು.
ಒಕ್ಕೂಟದ ಅಧ್ಯಕ್ಷೆ ಮಧುರ ಹಾಗೂ ಅತಿಥಿಗಳು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಮುಖ್ಯ ಪುಸ್ತಕ ಬರಹಗಾರರಾದ ಹರಿಣಾಕ್ಷಿ ಒಕ್ಕೂಟದ ವರದಿಯನ್ನು ಮಂಡಿಸಿದರು.ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಉಷಾ ಕಾಮತ್ ಸರಕಾರದ ವಿವಿಧ ಯೋಜನೆಗಳನ್ನು ಮಹಿಳೆಯರು ಯಾವ ರೀತಿ ಬಳಸಿಕೊಳ್ಳಬೇಕೆಂದು ತಿಳಿಸಿದರು.ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಪ್ರತಿಮಾ ಎನ್ ಆರ್ ಎಲ್ ಎಂ ಯೋಜನೆಯ ಬಗ್ಗೆ ಹಾಗೂ ಸಂಘಗಳಿಗೆ ಸೇರಿ ಮಹಿಳೆಯರು ಬೇರೆ ಬೇರೆ ಕಾರ್ಯಾಚಟುವಟಿಕೆಗಳಲ್ಲಿ ಸಾಧನೆ ಮಾಡಿರುವ ಬಗ್ಗೆ ತಿಳಿಸಿದರು.
ಸ್ತ್ರೀ ಶಕ್ತಿ ಮೇಲ್ವಿಚಾರಕಿ ಅನ್ನಪೂರ್ಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ತಿಳಿಸಿದರು.ಈ ಸಂದರ್ಭದಲ್ಲಿ ಸ್ತ್ರೀಶಕ್ತಿ ಹಾಗೂ ಸಂಜೀವಿನಿ ಸಂಘಗಳಲ್ಲಿ ಹೆಚ್ಚು ಸಾಧನೆ ಮಾಡಿದ ಸಂಘ ಹಾಗೂ ಸದಸ್ಯರನ್ನು ಗುರುತಿಸಿ ಸನ್ಮಾನಿಸಲಾಯಿತು. ಮಹಿಳೆಯರಿಗೆ ವಿವಿಧ ಮನೋರಂಜನ ಆಟಗಳನ್ನು ಆಯೋಜಿಸಿ ಬಹುಮಾನಗಳನ್ನು ವಿತರಣೆ ಮಾಡಲಾಯಿತು.
ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಗೀತಾ, ಪಂಚಾಯತ್ ಸದಸ್ಯರು, ಅಭಿವೃದ್ಧಿ ಅಧಿಕಾರಿ ಲಕ್ಷ್ಮೀಬಾಯಿ, ಒಕ್ಕೂಟದ ಅಧ್ಯಕ್ಷರು ಕಾರ್ಯದರ್ಶಿ ಪದಾಧಿಕಾರಿಗಳು, ಗೊಂಚಲಿನ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು, ಬ್ಲಾಕ್ ಸೊಸೈಟಿ ಅಧ್ಯಕ್ಷೆ ನಿಶಾ, ಎಂಬಿಕೆ ಹರಿಣಾಕ್ಷಿ , ಎಲ್ ಸಿ ಆರ್ ಪಿ ವಾಣಿ, ಸರಸ್ವತಿ, ಕೃಷಿ ಸಖಿ ಸ್ವಾತಿ, ಪಶುಸಖಿ ಯಶೋಧ, ಪಂಚಾಯತ್ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯವರು, ಅಂಗನವಾಡಿ ಕಾರ್ಯಕರ್ತೆಯರು, ಸಂಘದ ಸದಸ್ಯರು ಎಂ ಎಸ್ ಡಬ್ಲ್ಯೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಶಾಲಿನಿ ಕಾರ್ಯಕ್ರಮವನ್ನು ನಿರೂಪಿಸಿ ಲತಾ, ವಿದ್ಯಾ ಭಟ್, ಆಶಾ ಇವರ ಪ್ರಾರ್ಥಸಿ, ಕೃಷಿ ಸಖಿ ಸ್ವಾತಿ ಸ್ವಾಗತಿಸಿ, ಎಲ್ ಸಿ ಆರ್ ಪಿ ಸರಸ್ವತಿ ವಂದಿಸಿದರು.