ಚಾರ್ಮಾಡಿ ಘಾಟ್ ತಿರುವಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಬ್ರೇಕ್ ಫೇಲ್ ಆಗಿ ಡಿವೈಡರ್ ಗೆ ಡಿಕ್ಕಿ- ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

0

ಚಾರ್ಮಾಡಿ: ಚಾರ್ಮಾಡಿ ಘಾಟ್ ನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಬ್ರೇಕ್ ಫೇಲ್ ಆಗಿದ್ದು ಚಾಲಕನ ಸಮಯ ಪ್ರಜ್ಞೆಯಿಂದಾಗಿ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಕಡೂರಿನಿಂದ ಮಂಗಳೂರಿಗೆ ಬರುತ್ತಿದ್ದ ಬಸ್ ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಬ್ರೇಕ್ ಕಳೆದುಕೊಂಡಿದೆ.

ಇದನ್ನು ಗಮನಿಸಿದ ಚಾಲಕ ಸಮಯ ಪ್ರಜ್ಞೆಯಿಂದ ವರ್ತಿಸಿದ್ದಾನೆ ರಸ್ತೆ ಬದಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ಬಸ್ ನಿಲ್ಲುವಂತೆ ಮಾಡಿದ್ದಾನೆ.

ಯಾವುದೋ ಸಮಸ್ಯೆ ಆಗದೆ ರಸ್ತೆ ಬದಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ಬಸ್ ನಿಂತಿದೆ.

ಬಸ್ಸಿನಲ್ಲಿದ್ದ 70 ಮಂದಿ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

p>

LEAVE A REPLY

Please enter your comment!
Please enter your name here