Site icon Suddi Belthangady

ಧರ್ಮಸ್ಥಳ: ಶ್ರೀ ಧ.ಮಂ.ಆಂ.ಮಾ ಶಾಲಾ 10ನೇ ತರಗತಿ ವಿದ್ಯಾರ್ಥಿಗಳ ಹೆತ್ತವರ ಸಮಾಲೋಚನಾ ಸಭೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ 10ನೇ ತರಗತಿ ವಿದ್ಯಾರ್ಥಿಗಳ ಹೆತ್ತವರ ಸಮಾಲೋಚನಾ ಸಭೆಯನ್ನು ನಡೆಸಲಾಯಿತು.

ಈ ಸಭೆಗೆ ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕಾಲೇಜಿನ ಪ್ರಾಧ್ಯಾಪಕಿ ಡಾ.ಅಕ್ಷತಾ ಆಗಮಿಸಿದ್ದರು.

ಇವರು ಮಕ್ಕಳ ಓದುವ ಕ್ರಮ ಏಕಾಗ್ರತೆ ತರಿಸುವ ರೀತಿ, ಮಕ್ಕಳಿಗೆ ಹೆತ್ತವರು ಹೇಗೆ ಗಮನ ಕೊಡಬೇಕು, ಹೆತ್ತವರ ನಡವಳಿಕೆ ಹೇಗೆ ಇರಬೇಕು ಎಂಬಿತ್ಯಾದಿ ವಿಚಾರಗಳನ್ನು ಹೆತ್ತವರಿಗೆ ತಿಳಿಯಪಡಿಸಿ ಧರ್ಮಸ್ಥಳ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲಾ 10ನೇ ತರಗತಿ ವಿದ್ಯಾರ್ಥಿಗಳ ಹೆತ್ತವರ ಸಮಾಲೋಚನಾ ಸಭೆಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ 10ನೇ ತರಗತಿ ವಿದ್ಯಾರ್ಥಿಗಳ ಹೆತ್ತವರ ಸಮಾಲೋಚನಾ ಸಭೆಯನ್ನು ನಡೆಸಲಾಯಿತು.

ಈ ಸಭೆಗೆ ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕಾಲೇಜಿನ ಪ್ರಾಧ್ಯಾಪಕಿಯರು, ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ ವಿ ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಮಕ್ಕಳ ಸಾಧನೆ ಮುಂದಿನ ತಯಾರಿ ಬಗ್ಗೆ ಸಮಾಲೋಚನೆ ನಡೆಸಿ ಸ್ವಾಗತಿಸಿದರು.

ಹೆತ್ತವರು ಪೂರ್ವ ಸಿದ್ಧತಾ ಪರೀಕ್ಷೆಯ ಉತ್ತರ ಪತ್ರಿಕೆಯನ್ನು ನೋಡಿ ಶಿಕ್ಷಕರ ಜೊತೆಗೆ ಸಮಾಲೋಚನಾ ಮಾತುಕತೆ ನಡೆಸಿದರು.ಶಾಲಾ ಶಿಕ್ಷಕಿ ಆಶಾ ಕಾರ್ಯಕ್ರಮ ನಡೆಸಿ ವಂದಿಸಿದರು.

Exit mobile version