Site icon Suddi Belthangady

ಬೆಳ್ತಂಗಡಿಯಲ್ಲಿ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶ

ಬೆಳ್ತಂಗಡಿ: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಬೆಳ್ತಂಗಡಿ ವಿಧಾನ ಪರಿಷತ್ ಕ್ಷೇತ್ರದ ಫಲಾನುಭವಿಗಳ ಗ್ಯಾರಂಟಿ ಸಮಾವೇಶ ಮಾ.9ರಂದು ಬೆಳ್ತಂಗಡಿ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ಜರಗಿತು.

ಸರಕಾರದ 5 ಗ್ಯಾರಂಟಿ ಯೋಜನೆಗಳಾದ ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಶಕ್ತಿ ಯೋಜನೆ, ಅನ್ನಭಾಗ್ಯ, ಯುವ ನಿಧಿ ಇದರ ಬೆಳ್ತಂಗಡಿ ತಾಲೂಕು ಫಲಾನುಭವಿಗಳ ಸಮಾವೇಶವನ್ನು ವೇದಿಕೆಯಲ್ಲಿ ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು.

ವಿಧಾನ ಪರಿಷತ್ ಶಾಸಕ ಕೆ. ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿ.ಪ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಆನಂದ ಕೆ., ಜಿಲ್ಲಾ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ಫಲಾನುಭವಿಗಳು ಹಾಜರಿದ್ದರು.

ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕ್ ಸ್ವಾಗತಿಸಿದರು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್ ಪ್ರಸ್ತಾವನೆ ಗೈದರು. ಮಕ್ಕಳ ಮತ್ತು ಮಹಿಳಾ ಇಲಾಖೆಯ ಯೋಜನಾಧಿಕಾರಿ ಪ್ರಿಯ ಅಗ್ನೇಶ್, ಆಹಾರ ಇಲಾಖೆಯ ವಿಶ್ವ ಕೆ., ಜಿಲ್ಲಾ ಕೌಶಲ್ಯ ಅಭಿವೃದ್ಧಿ ಇಲಾಖೆಯ ಪ್ರವೀಣ್ ಡಿಸೋಜ, ಮೆಸ್ಕಾಂ ಇಲಾಖೆಯ ಕ್ಲೇಮೆಂಟ್ ಬೆಂಜನ್,ಗ್ಯಾರಂಟಿ ಯೋಜನೆಗಳ ವಿವರದ ವರದಿ ನೀಡಿದರು.ತಾಲೂಕು ಸಂಯೋಜಕ ಜಯಾನಂದ ಲಾಯಿಲ ನಿರೂಪಿಸಿದರು.

Exit mobile version