







ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ.7ರಿಂದ 12ರವರೆಗೆ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾಮಹೋತ್ಸವ ಜರಗಲಿದ್ದು.

ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಶಾಸಕ ಹರೀಶ್ ಪೂಂಜ ಮಾ.8ರಂದು ದೇವಸ್ಥಾನದಲ್ಲಿ ಬಿಡುಗಡೆ ಮಾಡಿದರು.


ಈ ಸಂದರ್ಭದಲ್ಲಿ ದೇವಸ್ಥಾನದ ಸಹಾಯಕ ಅರ್ಚಕರು ವಿಷ್ಣು ಪ್ರಸಾದ್ ಭಟ್, ಸಮಿತಿಯ ಕಾರ್ಯಾಧ್ಯಕ್ಷ ಸಂತೋಷ್ ಕುಮಾರ್ ಜೈನ್ ಪಡಂಗಡಿ, ಉಪಾಧ್ಯಕ್ಷ ದಾಮೋದರ ಕುಂದರ್, ಶ್ರೀಕಾಂತ್ ಶೆಟ್ಟಿ ಮುಂಡಾಡಿ, ಪ್ರಧಾನ ಕಾರ್ಯದರ್ಶಿ ಚಿದಾನಂದ ಇಡ್ಯ, ಕೋಶಾಧಿಕಾರಿ ವಸಂತ ಗೌಡ, ಗಂಗಾಧರ ಭಟ್ ಕೆವುಡೇಲು, ಪ್ರಭಾಕರ ಶೆಟ್ಟಿ ಉಪ್ಪಡ್ಕ, ಹಿರಿಯರಾದ ಅಣ್ಣಿ ಮೂಲ್ಯ, ನಾರಾಯಣ ಮೂಲ್ಯ ಓಡೀಲು, ಭಜನಾ ಸಮಿತಿ ಅಧ್ಯಕ್ಷ ಸಂದೇಶ್ ಅನಿಲ, ಯುವ ಸಮಿತಿ ಅಧ್ಯಕ್ಷ ಅಶ್ವಿತ್ ಓಡೀಲು, ಜಯಕರ ಶೆಟ್ಟಿ ಮೂಡೈಲು, ರಾಕೇಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ವಿಶೇಷವಾಗಿ ಮಹಾಶಿವರಾತ್ರಿ ಪ್ರಯುಕ್ತ ವಿವಿದ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ಜರಗಿತು.








