ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ( ಡಿ.ಇ.ಎಲ್.ಇಡಿ) ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಡಾಟ್ ಮಂಡಲ ಆರ್ಟ್ ನಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ಮಾಡಿದ ಹಾಗು ಇನ್ನಿತರ ಚಿತ್ರಕಲಾ ಪ್ರದರ್ಶನದಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡ ಬೆಳ್ತಂಗಡಿಯ ಲಾಯಿಲ ಗ್ರಾಮದ ಕು.ಸುರಕ್ಷ ಆಚಾರ್ಯ ಮಾತನಾಡುತ್ತಾ ಮಹಿಳೆಯು ಕುಟುಂಬದ ಆಧಾರಸ್ತಂಭ.
ಸಮಾಜದಲ್ಲಿ ಹೆಣ್ಣು ತಾಯಿಯಾಗಿ, ಮಗಳಾಗಿ, ಸಹೋದರಿಯಾಗಿ, ಹೆಂಡತಿಯಾಗಿ ಪಾತ್ರ ನಿರ್ವಹಿಸುವುದರ ಜೊತೆಗೆ ಸಮಾಜದ ಮುಖ್ಯ ವಾಹಿನಿಯಲ್ಲಿ ತೊಡಗಿಸಿಕೊಂಡು ಸ್ವತಂತ್ರಳಾಗಿ ಜೀವನ ನಡೆಸುವುದರೊಂದಿಗೆ ಇನ್ನೊಬ್ಬರಿಗೆ ಸ್ಫೂರ್ತಿಯಾಗಬೇಕೆಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಉಪನ್ಯಾಸಕಿ ಅನುಷಾ ಡಿ.ಜೆ. ವಹಿಸಿ ಮಾತನಾಡುತ್ತಾ ಹೆಣ್ಣು ಸಮಾಜದ ಕಣ್ಣು ಸಮಾಜದಲ್ಲಿ ಹೆಣ್ಣಿಗೆ ವಿಶೇಷವಾದ ಸ್ಥಾನಮಾನವಿದೆ. ಪ್ರತಿಯೊಂದು ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿ ವಿಶ್ವದ ಗಮನ ಸೆಳೆಯುವಲ್ಲಿ ಮಹಿಳೆಯ ಪಾತ್ರ ಮಹತ್ತರವಾದದ್ದು ಎಂದು ಹೇಳಿದರು.
ಪ್ರಶಿಕ್ಷಣಾರ್ಥಿಗಳಾದ ವಂದನಾ ಹಾಗೂ ಭೂಮಿಕಾ ಅಂತರಾಷ್ಟ್ರೀಯ ಮಹಿಳಾ ದಿನದ ಕುರಿತು ಮಾತನಾಡಿದರು.
ಉಪನ್ಯಾಸಕರಾದ ಮಂಜು ಆರ್ ಹಾಗೂ ಸಿಬ್ಬಂದಿ ವರ್ಗದವರು, ಪ್ರಶಿಕ್ಷಣಾರ್ಥಿಗಳು ಉಪಸ್ಥಿರಿದ್ದರು.
ಪ್ರಶಿಕ್ಷಣಾರ್ಥಿಗಳಾದ ಅಂಬಿಕಾ ಪ್ರಾರ್ಥಿಸಿ ಧನ್ಯಶ್ರೀ ಸ್ವಾಗತಿಸಿ. ಸುರಕ್ಷಾ ವಂದಿಸಿ. ಫಾತಿಮತ್ ರಾಯೀಝ ಕಾರ್ಯಕ್ರಮ ನಿರೂಪಿಸಿದರು.