Site icon Suddi Belthangady

ಭೂ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ಊರಿಗೆ ಆಗಮಿಸಿದ ಸುಬೇದರ್ ಮೇಜರ್ ಪ್ರವೀಣ್ ಶೆಣೈ ಯವರಿಗೆ ಸ್ವಾಗತ, ಸನ್ಮಾನ

ಬೆಳ್ತಂಗಡಿ: ಭಾರತೀಯ ಭೂ ಸೇನೆಯಲ್ಲಿ 30 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಆಗಮಿಸಿದ ಸುಬೇದಾರ್ ಮೇಜರ್ ಪ್ರವೀಣ್ ಶೆಣೈಯವರಿಗೆ ಸ್ವಾಗತ ಮತ್ತು ಸನ್ಮಾನ ಕಾರ್ಯಕ್ರಮ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಮಾ.9ರಂದು ನಡೆಯಿತು.

ಸಭೆಯಲ್ಲಿ ಶಾಸಕ ಹರೀಶ್ ಪೂಂಜ, ನಿವೃತ್ತ ಸೈನಿಕರ ಸಂಘದ ಗೌರವ ಅಧ್ಯಕ್ಷ ನಿವೃತ್ತ ಮೇಜರ್ ಜನರಲ್ ಎಂ. ವಿ. ಭಟ್, ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ಅಧ್ಯಕ್ಷ ರಂಜನ್ ರಾವ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನಿವೃತ್ತ ಸೈನಿಕರ ಸಂಘದ ಅಧ್ಯಕ್ಷ ಮಹಮ್ಮದ್ ರಫಿ, ಕಾರ್ಯದರ್ಶಿ ಉಮೇಶ್ ಬಂಗೇರ, ಮಂಜುಶ್ರೀ ಸೀನಿಯರ್ ಛೇಂಬರ್ ಪದಾಧಿಕಾರಿಗಳು, ಪ್ರವೀಣ್ ಶೆಣೈರವರ ಕುಟುಂಬಸ್ಥರು, ಹಿತೈಷಿಗಳು ಹಾಜರಿದ್ದರು.

ನಿವೃತ್ತ ಸೈನಿಕರ ಸಂಘದ ಮಾಜಿ ಅಧ್ಯಕ್ಷ ಸುನಿಲ್ ಶೆಣೈ ಸ್ವಾಗತಿಸಿದರು.

ಕಾರ್ಯಕ್ರಮದ ಮೊದಲು ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ದೇವಸ್ಥಾನದಿಂದ ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.

Exit mobile version