Site icon Suddi Belthangady

ಪೊಲೀಸರ ಮೇಲೆ ತಂಡದಿಂದ ಹಲ್ಲೆ- ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಪೊಲೀಸರ ಮೇಲೆ ಹತ್ತಕ್ಕೂ ಹೆಚ್ಚು ಮಂದಿಯ ತಂಡವೊಂದು ಹಲ್ಲೆ ನಡೆಸಿದ ಘಟನೆ ತೆಂಕಕಾರಂದೂರು ಗ್ರಾಮದ ಪೆರಾಲ್ಡಕಟ್ಟೆ ಸಮೀಪ ಸಂಭವಿಸಿದ್ದು ಘಟನೆಯ ಬಗ್ಗೆ ಮೂವರ ವಿರುದ್ಧ ಹಾಗೂ ಇತರ ಅಪರಿಚಿತರ ವಿರುದ್ಧ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಹೇಶ್, ಸುರೇಶ್‌, ಅರುಣ್ ಹಾಗೂ ಇತರ ಹತ್ತಕ್ಕೂ ಹೆಚ್ಚು ಮಂದಿ ಪೊಲೀಸರ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ.

ವೇಣೂರು ಪೊಲೀಸ್ ಠಾಣೆಯ ಎ.ಎಸ್.ಐ ರಾಮಯ್ಯ ಹೆಗ್ಡೆ ಅವರು ಯುವಕರ ತಂಡ ಶಿವರಾತ್ರಿಯಂದು ರಸ್ತೆಯಲ್ಲಿ ದಾಂಧಲೆ ನಡೆಸುತ್ತಿರುವ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ್ದು, ತಡ ರಾತ್ರಿ ವೇಳೆ ರಸ್ತೆಯಲ್ಲಿದ್ದ ಯುವಕರನ್ನು ರಸ್ತೆಯಲ್ಲಿ ಗಾಜಿನ ಬಾಟ್ಲಿಗಳನ್ನು ಒಡೆದು ಹಾಕಿರುವ ಬಗ್ಗೆ ಎ.ಎಸ್‌.ಐ ಅವರು ಪ್ರಶ್ನಿಸಿದ್ದು, ಇದರಿಂದ ಸಿಟ್ಟುಗೊಂಡ ತಂಡ ಅವರ ಮೇಲೆ ದಾಳಿ ನಡೆಸಿ, ಅವರಿಗೆ ಹಲ್ಲೆ ಮಾಡಿ ಗಾಯಗೊಳಿಸಿದ್ದಾರೆ.

ಈ ಬಗ್ಗೆ ರಾಮಯ್ಯ ಅವರು ನೀಡಿರುವ ದೂರಿನಂತೆ ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಐವರನ್ನು ವಶಕ್ಕೆ ಪಡೆದು ಕೊಂಡಿರುವುದಾಗಿ ತಿಳಿದು ಬಂದಿದೆ.ರಾಮಯ್ಯ ಅವರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Exit mobile version