ಮುಂಡಾಜೆ ಸೀಟು ಬಳಿ ಚರಂಡಿಗೆ ಉರುಳಿದ ಕಾರು

0

ಮುಂಡಾಜೆ : ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಎಂಬಲ್ಲಿ ಉಜಿರೆಯಿಂದ ಚಾರ್ಮಾಡಿಯತ್ತ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಘಟನೆ ಮಾ.10ರಂದು ನಡೆದಿದೆ.

ಈ ಪರಿಸರದಲ್ಲಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯು ಪ್ರಗತಿಯಲ್ಲಿದ್ದು ರಸ್ತೆಯನ್ನು ಅಲ್ಲಲ್ಲಿ ಅಗೆದು ಹಾಕಲಾಗಿದೆ. ವಿಪರೀತ ಧೂಳು ಕೂಡ ಇರುವುದು ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here