Site icon Suddi Belthangady

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ-ವರ್ತಕರ ಸಂಘದಿಂದ ಜನ ಸಂಪರ್ಕ ಸಭೆ- ಧೂಳು ಏಳದಂತೆ ತಕ್ಷಣ ಕ್ರಮ ಕೈಗೊಳ್ಳಿ ಶಾಸಕರ ಆಗ್ರಹ

ಬೆಳ್ತಂಗಡಿ: ಪುಂಜಾಲಕಟ್ಟೆಯಿಂದ ಚಾರ್ಮಾಡಿಯವರೆಗೆ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ಅವ್ಯವಸ್ಥೆಯಿಂದ ಕೂಡಿದ್ದು ನಗರದಲ್ಲಿ ಹಾದು ಹೋಗುವ ರಸ್ತೆಗಳ ಬಗ್ಗೆ ವರ್ತಕರ ಹಾಗೂ ಕಟ್ಟಡ ಮಾಲೀಕರ ಗೊಂದಲಗಳಿಗೆ ಪರಿಹಾರ ಕಂಡುಕೊಳ್ಳಲು ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ವರ್ತಕರ ಸಂಘದ ಬೇಡಿಕೆಯ ಮೇರೆಗೆ ಹೆದ್ದಾರಿ ಅಧಿಕಾರಿಗಳು, ಗುತ್ತಿಗೆದಾರರು, ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಜನಸಂಪರ್ಕ ಸಭೆ ಮಾ.10ರಂದು ಗುರುವಾಯನಕೆರೆ, ಹಳೇಕೋಟೆ, ಚರ್ಚ್ ರೋಡ್, ಸಂತೆ ಕಟ್ಟೆ ಬಸ್ ನಿಲ್ದಾಣದಲ್ಲಿ ನಡೆಯಿತು.

ಈ ವೇಳೆ ಅಸಮಾಧಾನ ಹೊರ ಹಾಕಿದ ವರ್ತಕರು ಸೇರಿದಂತೆ ಸಾರ್ವಜನಿಕರು ದೂಳಿನಿಂದಾಗಿ ಸಂಚರಿಸಲು ಕಷ್ಟವಾಗುತ್ತಿದೆ. ಗುತ್ತಿಗೆದಾರರಲ್ಲಿ ನೀರು ಹಾಕುವಂತೆ ಸೂಚಿಸಿದರೂ ಸ್ಪಂದಿಸುತ್ತಿಲ್ಲ ಎಂದು ಶಾಸಕರಲ್ಲಿ ಹೇಳಿದಾಗ ಶಾಸಕರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರಲ್ಲದೇ ದಿನಂಪ್ರತಿ ಮೂರು ಹೊತ್ತು ಧೂಳು ಏಳದಂತೆ ನೀರು ಸಿಂಪಡಿಸಬೇಕು ಜನರ ಸಮಸ್ಯೆಗೆ ಸ್ಪಂದಿಸಬೇಕು ಎಂದರಲ್ಲದೆ ಒಂದು ವೇಳೆ ನೀರು ಹಾಕದಿದ್ದರೆ ನನ್ನ ಗಮನಕ್ಕೆ ತನ್ನಿ ಎಂದರು.

ಚರಂಡಿ ನಿರ್ಮಾಣದ ಬಗ್ಗೆ ಸರಿಯಾದ ಮಾಹಿತಿ ನೀಡಬೇಕು ಮಳೆಗಾಲದಲ್ಲಿ ಮಳೆ ನೀರು ಹರಿದು ಹೋಗಲು ಸರಿಯಾದ ಕ್ರಮ ಕೈಗೊಳ್ಳಬೇಕು, ರಸ್ತೆ ಒತ್ತುವರಿ ಬಗ್ಗೆ ಸಮರ್ಪಕ ಮಾಹಿತಿ ಇನ್ನು ಬಂದಿಲ್ಲ ಈ ಬಗ್ಗೆಯೂ ಸಂಪೂರ್ಣ ಮಾಹಿತಿಯನ್ನು ಎಲ್ಲರಿಗೂ ತಿಳಿಸಬೇಕು ಎಂದು ವರ್ತಕರು ಹೇಳಿದಾಗ ಇನ್ನು ಎರಡು ದಿನದೊಳಗೆ ಈ ಬಗ್ಗೆ ವಿವರಗಳನ್ನು ನೀಡಲಾಗುವುದು ಎಂದು ಇಂಜಿನಿಯರ್ ಶಿವಪ್ರಸಾದ್ ಅಜಿಲ ತಿಳಿಸಿದರು.

ಶಾಲೆ ಇರುವ ಪ್ರದೇಶದಲ್ಲಿ ಶಾಲಾ ಮಕ್ಕಳು ರಸ್ತೆ ದಾಟಲು ಯಾವ ರೀತಿಯ ಕ್ರಮ ಕೈಗೊಂಡಿದ್ದೀರಿ ಈಗಾಗಲೇ ವಾಹನ ದಟ್ಟಣೆಯಿಂದ ರಸ್ತೆ ಕ್ರಾಸ್ ಮಾಡಲು ಪರದಾಡುವಂತಾಗಿದೆ.

ಮುಂದೆ ಹೆದ್ದಾರಿಯಾದಲ್ಲಿ ಇನ್ನಷ್ಟು ಸಮಸ್ಯೆ ಶಾಲಾ ಮಕ್ಕಳಿಗೆ ತೊಂದರೆಯಾದೀತು ಎಂದು ಕುಶಾಲಪ್ಪ ಗೌಡ ಆತಂಕ ವ್ಯಕ್ತ ಪಡಿಸಿದಾಗ ಶಾಲಾ ಮಕ್ಕಳಿಗಾಗಿ ಹಾಗೂ ಸಾರ್ವಜನಿಕರ ಉಪಯೋಗಕ್ಕಾಗಿ ನಿರ್ಧಿಷ್ಟ ಸ್ಥಳದಲ್ಲಿ ಓವರ್ ಬ್ರೀಡ್ಜ್ ಅಳವಡಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

Exit mobile version