ಬೆಳಾಲು ಪ್ರೌಢ ಶಾಲೆಯಲ್ಲಿ ಮತದಾನದ ಜಾಗೃತಿ

0

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮತದಾನದ ಬಗ್ಗೆ ಜಾಗೃತಿ ಮಾಹಿತಿ ಕಾರ್ಯಕ್ರಮ ಜರಗಿತು.

ಮಾಹಿತಿ ನೀಡಲು ಆಗಮಿಸಿದ ಸಂಪನ್ಮೂಲ ವ್ಯಕ್ತಿ ಮಾಯ ಶಾಲಾ ಶಿಕ್ಷಕ ಯೋಗಿಶ್ ಮಾತನಾಡುತ್ತಾ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನವೆಂಬುದು ಜನತೆಗೆ ನೀಡಿದ ಹಕ್ಕು.

ಈ ಹಕ್ಕನ್ನು ಚಲಾಯಿಸುವ ಮೂಲಕ ಉತ್ತಮ ಆಯ್ಕೆ ಹಾಗೂ ಸದೃಢ ಸಮಾಜ ನಿರ್ಮಾಣ ಮಾಡುವುದರಲ್ಲಿ ಜನ ಜಾಗೃತರಾಗಬೇಕು.ವಿದ್ಯಾರ್ಥಿಗಳು ಭವಿಷ್ಯದ ಪ್ರಜೆಗಳು.ಈ ಬಗ್ಗೆ ತಿಳುವಳಿಕೆಯನ್ನು ಪಡೆಯುವ ಮೂಲಕ ಜಾಗೃತ ನಾಗರಿಕರಾಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಬೆಳಾಲು ಗ್ರಾಮ ಪಂಚಾಯತ್ ನ ವಾಚನಾಲಯದ ಅಧಿಕಾರಿ ಡೀಕಯ್ಯ ಗೌಡ ಅರಣೆಮಾರು ಮತ್ತು ಶಾಲೆಯ ಶಿಕ್ಷಕ ಸಿಬ್ಬಂದಿಗಳೆಲ್ಲರು ಉಪಸ್ಥಿತರಿದ್ದರು.

ಕಾರ್ಯಕ್ರಮ ನಿರೂಪಿಸಿದ ಶಿಕ್ಷಕ ಸುಮನ್ ಯು.ಎಸ್ ರವರು ಸ್ವಾಗತಿಸಿ, ಶಿಕ್ಷಕ ಗಣೇಶ್ ರವರು ವಂದಿಸಿದರು.

LEAVE A REPLY

Please enter your comment!
Please enter your name here