ಬೆಳ್ತಂಗಡಿ: ಜೀವನದಲ್ಲಿ ಸಮಸ್ಯೆಗಳು ಬಂದಾಗ ಅದನ್ನು ಎದುರಿಸುವ ಶಕ್ತಿ ಮಹಿಳೆಯರಿಗಿದೆ.ಏನೇ ಕಷ್ಟ ಬಂದರೂ ಧೈರ್ಯರಿಂದ ಮುನ್ನಡೆಯಬೇಕು ಎಂದು ಮಾ.11ರಂದು ಬೆಳ್ತಂಗಡಿ ಸಾಂತೋಮ್ ಟವರ್ ನಲ್ಲಿ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಉದ್ಘಾಟನೆಯನ್ನು ನೆರವೇರಿಸಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಯಿ ಮಾತನಾಡಿದರು.
ಧರ್ಮಾಧ್ಯಕ್ಷ ದೀಕ್ಷೆಯ ಬೆಳ್ಳಿ ಹಬ್ಬ ಆಚರಿಸುತ್ತಿರುವ ಪರಮಪೂಜ್ಯ ಧರ್ಮಾಧ್ಯಕ್ಷರಿಗೆ ಒಕ್ಕೂಟದ ವತಿಯಿಂದ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಮಂಜುಳಾ ಜೋನ್ ರವರು ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ ಜೋಳಿ ಓಂ.ಎ ಪ್ರಾಂಶುಪಾಲರು ಮುಂಡಾಜೆ ಪದವಿ ಪೂರ್ವ ಕಾಲೇಜು ಮುಂಡಾಜೆ ಇವರು ತರಕಾರಿ ತೋಟ ರಚನೆ ಸ್ಪರ್ಧೆಯಲ್ಲಿ ವಿಜೇತರಾದ ಮಹಿಳೆಯರಿಗೆ ಬಹುಮಾನ ವಿತರಿಸಿ, ಕುಟುಂಬ ಮತ್ತು ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರದ ಬಗ್ಗೆ ತಿಳಿಸಿದರು.
ಇನ್ನೋರ್ವ ಅತಿಥಿ ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ರವರು ಶುಭ ಹಾರೈಸಿದರು.ಸವಿತಾ ಜೈ ದೇವ್ ರವರು ರಾಜ್ಯ ಒಕ್ಕೂಟದ ಅಧ್ಯಕ್ಷೆಯಾಗಿ ಆಯ್ಕೆಯಾದ ಮಂಜುಳಾ ಜೋನ್ ರವರಿಗೆ ಸನ್ಮಾನಿಸಿ, ಹಾರೈಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ವಕೀಲೆ ಸ್ವರ್ಣಲತಾರವರು ಮಹಿಳಾ ಹಕ್ಕುಗಳ ಬಗ್ಗೆ ತರಬೇತಿ ನೀಡಿದರು.
ಹತ್ತನೇ ತರಗತಿಯಲ್ಲಿ ಶೇ.98.2 ಪಡೆದ ಮಾ.ಶೋನ್ ಇವರಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು ಹಾಗೂ ವಿದ್ಯಾರ್ಥಿವೇತನ ನೀಡಲು ಸಹಕರಿಸಿದ ಫಿಲಿಪ್ ಮಾದವತ್ ಇವರನ್ನು ಪರಮಪೂಜ್ಯ ಧರ್ಮಾಧ್ಯಕ್ಷರು ಸನ್ಮಾನಿಸಿದರು.
ಸಂಸ್ಥೆ ನಿರ್ದೇಶಕ ವಂ.ಫಾ. ಬಿನೋಯಿ ಎಂ.ಜೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಬೆಳ್ತಂಗಡಿ, ತೋಟತ್ತಾಡಿ ಮತ್ತು ಗಂಡಿ ಬಾಗಿಲು ಮಹಾಸಂಘಗಳ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅಲೋಶಿಯಸ್ ಕಾಲೇಜು ಮಂಗಳೂರು ಮತ್ತು ರೋಶನಿ ನಿಲಯ ಸಮಾಜ ಕಾರ್ಯ ವಿಭಾಗ ವಿಧ್ಯಾರ್ಥಿಗಳು, ಡಿ.ಕೆ.ಆರ್.ಡಿ.ಎಸ್ ಸಿಬ್ಬಂದಿಗಳು ಹಾಗೂ ಸಂಘಗಳ ಸದಸ್ಯರು ಭಾಗವಹಿಸಿದ್ದರು.
ಸೌರಭ ಸಂಘ ಧರ್ಮಸ್ಥಳ ಇದರ ಸದಸ್ಯರು ಪ್ರಾರ್ಥನೆ ಗೀತೆ ಹಾಡಿದರು. ಒಕ್ಕೂಟದ ಕಾರ್ಯದರ್ಶಿ ಲಲಿತ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಉಷಾ ವಂದಿಸಿದರು. ಉಪಾಧ್ಯಕ್ಷೆ ಜಿನ್ಸಿ ರಾಜೇಶ್ ಕಾರ್ಯಕ್ರಮ ನಿರೂಪಿಸಿದರು.