ಕೊಯ್ಯೂರು ಗ್ರಾ.ಪಂನಲ್ಲಿ ದ್ವಿತೀಯ ಸುತ್ತಿನ ಗ್ರಾಮ ಸಭೆ

0

ಕೊಯ್ಯೂರು: ಕೊಯ್ಯೂರು ಗ್ರಾಮ ಪಂಚಾಯತ್ ನ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆ ಮಾ.12ರಂದು ಗ್ರಾಮ ಪಂಚಾಯತ್ ಅಧ್ಯಕ್ಷೆ ದಯಾಮಣಿ ಇವರ ಅಧ್ಯಕ್ಷತೆಯಲ್ಲಿ ಆದೂರುಪೇರಲ್ ಪಂಚದುರ್ಗಾ ಸಭಾಭವನದಲ್ಲಿ ಜರಗಿತು.

ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ವಿದ್ಯಾ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿದರು.ಪಂಚಾಯತ್ ಉಪಾಧ್ಯಕ್ಷ ಹರೀಶ್, ಪಂಚಾಯತ್ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಗ್ರಾಮಸ್ಥರು ಹಾಜರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಎಸ್. ಸ್ವಾಗತಿಸಿ ಅನುಪಾಲನಾ ವರದಿ ವಾಚಿಸಿದರು.

ಕಾರ್ಯದರ್ಶಿ ಪರಮೇಶ್ವರ ವರದಿ, ಲೆಕ್ಕಪತ್ರ ಮಂಡಿಸಿದರು.ಬಳಿಕ ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here