ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನ ಕನ್ಯಾಡಿ ಇದರ ಶಾಖಾ ಮಠ ಭಟ್ಕಳದ ಕರಿಕಲ್ ಸಮುದ್ರ ತೀಲದಲ್ಲಿರುವ ಶ್ರೀರಾಮನ ದ್ಯಾನ ಮಂದಿರದ ಪ್ರತಿಷ್ಠಾಪ ವರ್ಧಂತಿ ಮಹೋತ್ಸವ ಸಮಾರಂಭದ ಕ್ಷೇತ್ರದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಮಾ.4ರಂದು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು.
ನಂತರ ನಡೆದ ಧಾರ್ಮಿಕ ಸಭೆಯಲ್ಲಿ ಸ್ವಾಮೀಜಿ ಆಶೀರ್ವಚನ ನೀಡಿದರು.
ಕಾರ್ಯಕ್ರಮದ ಪೂರ್ವದಲ್ಲಿ ಶ್ರೀರಾಮ ಕ್ಷೇತ್ರ ಸೇವಾ ಸಮಿತಿ ಅಧ್ಯಕ್ಷ ಶ್ರೀಧರ ನಾಯ್ಕ ಸ್ವಾಗತಿಸಿದರು. ಆಸರಕೇರಿ ಗುರುಮಠದ ಉಪಾದ್ಯಕ್ಷ ಎಂ.ಕೆ.ನಾಯ್ಕ ವಂದಿಸಿದರು.
ಧಾರ್ಮಿಕ ಕಾರ್ಯಕ್ರಮದ ಪೂರ್ವದಲ್ಲಿ ಭಟ್ಕಳ ನಾಮಧರಿ ಗುರುಮಠದ ಆಡಳಿತ ಮಂಡಳಿ ಹಾಗೂ ಶಿರಾಲಿ ಸಾರದಹೊಳೆ ಹನುಮಂತ ದೇವಸ್ಥಾನದ ಆಡಳಿತ ಮಂಡಳಿಯವರಿಂದ ಸ್ವಾಮೀಜಿಯವರಿಗೆ ಪಾದಪೂಜೆ ನೆರವೇರಿಸಿದರು.
ವರ್ಧಂತಿ ಉತ್ಸವದ ಅಂಗವಾಗಿ ಲೋಕ ಕಲ್ಯಾಣಾರ್ಥವಾಗಿ ರಾಮತಾರಕ ಮಹಾಯಜ್ಞ ನಡೆಯಿತು.ಮಧ್ಯಾಹ್ನ ಮಹಾಪೂಜೆ ನಂತರ ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಿತು.
ಸಾವಿರಾರು ಭಕ್ತರು ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಮೀನುಗಾರಿಕೆ ಮತ್ತು ಒಳನಾಡು ಸಚಿವ ಮಂಕಾಳ ವೈದ್ಯ, ನಾಮಧಾರಿ ಗುರುಮಠದ ಅಧ್ಯಕ್ಷ ಅರುಣ್ ನಾಯ್ಕ, ಶಿರಾಲಿ ಸಾರದ ಹೊಳೆ ಹಳೆಕೋಟೆ ಹನುಮಂತ ದೇವಸ್ಥಾನದ ಅಧ್ಯಕ್ಷ ಆರ್.ಕೆ.ನಾಯ್ಕ, ಎಲ್.ಎಸ್.ನಾಯ್ಕ, ಹೊನ್ನಾವರದ ವಾಮನ ನಾಯ್ಕ, ಎಂ.ಜಿ.ಎಂ ಬ್ಯಾಂಕಿನ ಅಧ್ಯಕ್ಷ ಈರಪ್ಪ ಗರ್ಡಿಕರ, ಉ.ಕ., ದ.ಕ, ಉಡುಪಿ ಜಿಲ್ಲೆಯ, ಬೆಳ್ತಂಗಡಿ ತಾಲೂಕು ಭಕ್ತಾಧಿಗಳು ಉಪಸ್ಥಿತರಿದ್ದರು.