

ಉಜಿರೆ: ಹಿರಿಯ ಸಾಹಿತಿ, ಪತ್ರಕರ್ತ, ಕಥೆಗಾರ, ನಾ.ವುಜಿರೆ ಅವರು ಹಿಂದಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.ಅವರು ಸಾಹಿತ್ಯ ಕ್ಷೇತ್ರದಲ್ಲಿ ಬಹುದೊಡ್ಡ ಕೊಡುಗೆ ನೀಡಿದ ಅವರು ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
ಅಪಾರ ಸಾಧನೆ ಮಾಡಿದ ಬಹುಮುಖ ವ್ಯಕ್ತಿತ್ವ .ನಾ.ವುಜಿರೆ ನಿಧನ ಅತೀವ ದುಃಖ ತಂದಿದೆ.
ಮೃತರ ಆತ್ಮಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಚಿರಶಾಂತಿ ಕೋರುತ್ತದೆ.
ಅವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ಎಂ.ಪಿ.ಶ್ರೀನಾಥ ತನ್ನ ಸಂದೇಶದಲ್ಲಿ ತಿಳಿಸಿದ್ದಾರೆ.