ದ್ವಿತೀಯ ಪಿಯುಸಿ ಪರೀಕ್ಷೆ: ಬಸ್ ಇಲ್ಲದೆ ವಿದ್ಯಾರ್ಥಿಗಳ ಪರದಾಟ

0

ಬೆಳ್ತಂಗಡಿ: ದ್ವಿತೀಯ ಪಿಯುಸಿ ಆಂಗ್ಲ ಭಾಷಾ ಪರೀಕ್ಷೆ (ಇಂದು)ಮಾ.13ರಂದು ನಡೆದಿದ್ದು ಎಲ್ಲಾ ವಿದ್ಯಾರ್ಥಿಗಳಿಗೆ ಅನ್ವಯವಾಗುವುದದಿಂದ ಪರೀಕ್ಷಾ ಕೇಂದ್ರಗಳಿಗೆ ತೆರಳುವ ವಿದ್ಯಾರ್ಥಿಗಳು ಹೆಚ್ಚುವರಿ ಬಸ್ ವ್ಯವಸ್ಥೆ ಇಲ್ಲದ ಕಾರಣ ಪರದಾಟ ನಡೆಸುವಂತಾಯಿತು.

ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಕಾಲೇಜುಗಳಲ್ಲಿ ಪರೀಕ್ಷಾ ಕೇಂದ್ರಗಳಿದ್ದರೂ, ಶಿಕ್ಷಣ ಇಲಾಖೆ ಹಾಗೂ ಸರಕಾರ ರೂಪಿಸಿರುವ ನಿಯಮದ ಪ್ರಕಾರ ಅವರಿಗೆ ಅಲ್ಲಿ ಪರೀಕ್ಷೆಗೆ ಅವಕಾಶ ನೀಡದೆ ಬೇರೆ ಕಾಲೇಜುಗಳಲ್ಲಿ ಪರೀಕ್ಷೆ ಬರೆಯುವ ಅನಿವಾರ್ಯತೆ ಇದೆ.

ಉಜಿರೆ, ಮುಂಡಾಜೆ, ಕಕ್ಕಿಂಜೆ, ಚಾರ್ಮಾಡಿ, ದಿಡುಪೆ ಮೊದಲಾದ ಕಡೆಗಳ ವಿದ್ಯಾರ್ಥಿಗಳು ಬೆಳ್ತಂಗಡಿ, ಪುಂಜಾಲಕಟ್ಟೆ, ಮಡಂತ್ಯಾರು ಮೊದಲಾದ ಕಾಲೇಜುಗಳಲ್ಲಿ ಪರೀಕ್ಷೆ ಬರೆದರೆ ಆ ಭಾಗದ ವಿದ್ಯಾರ್ಥಿಗಳು ಈ ಭಾಗದ ಕಾಲೇಜುಗಳಲ್ಲಿ ಪರೀಕ್ಷೆ ಬರೆಯಬೇಕು.ಈ ಕಾರಣದಿಂದ ಭಾರಿ ಸಂಖ್ಯೆಯ ವಿದ್ಯಾರ್ಥಿಗಳು ಕಂಡುಬಂದರು.

ಪರೀಕ್ಷಾ ಕೇಂದ್ರಗಳನ್ನು ಬದಲಿಸಿದ್ದರು ಅಲ್ಲಿಗೆ ಹೋಗಬೇಕಾದ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಿಲ್ಲ.ಈ ಕಾರಣದಿಂದ ವಿದ್ಯಾರ್ಥಿಗಳು ಸಂಕಷ್ಟ ಅನುಭವಿಸುವಂತಾಗಿದೆ.ತಾಲೂಕಿನ ಹೆಚ್ಚಿನ ಕಾಲೇಜುಗಳು ಪೇಟೆ ಪ್ರದೇಶಗಳಿಂದ ಹೊರಭಾಗದಲ್ಲಿರುವ ಕಾರಣ ಹಲವೆಡೆ ಎಕ್ಸ್ ಪ್ರೆಸ್ ಬಸ್ಸುಗಳು ನಿಲುಗಡೆ ನೀಡುವುದಿಲ್ಲ.

ಇದರಿಂದ ವಿದ್ಯಾರ್ಥಿಗಳಿಗೆ ಮಾಮೂಲಿ ಸಂಚರಿಸುವ ಲೋಕಲ್ ಬಸ್ ಗಳೇ ಆಧಾರ.ಇವು ಟ್ರಿಪ್ ಆರಂಭಿಸುವ ಸ್ಥಳದಿಂದಲೇ ತುಂಬಿ ಬರುತ್ತಿದ್ದು ಇವುಗಳನ್ನು ಏರಲು ಜಾಗವಿಲ್ಲದಷ್ಟು ಜನಸಂದಣಿ ಇತ್ತು.

ಉಜಿರೆ ಸೇರಿದಂತೆ ತಾಲೂಕಿನ ವಿವಿದೆಡೆ ಮಾ.13ರಂದು ಬೆಳಗ್ಗೆ 9ಗಂಟೆ ಸುಮಾರಿಗೆ ನೂರಾರು ವಿದ್ಯಾರ್ಥಿಗಳು ಬಸ್ ಗಳಿಗಾಗಿ ಕಾಯುತ್ತಿರುವುದು ಕಂಡುಬಂತು.ಇದು ಪ್ರತಿನಿತ್ಯ ಪ್ರಯಾಣ ಮಾಡುವ ಪ್ರಯಾಣಿಕರ ಮೇಲೂ ಪರಿಣಾಮ ಬೀರಿತು.

ಬಸ್ ಗಳಿಗೆ ಕಾದು ಸುಸ್ತಾದ ಅನೇಕ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರವನ್ನು ಸಮಯಕ್ಕೆ ಸರಿಯಾಗಿ ತಲುಪಲು ಬಾಡಿಗೆ ವಾಹನಗಳಿಗೆ ದುಬಾರಿ ಮೊತ್ತ ಪಾವತಿಸಿ ಸಂಚರಿಸುವುದು ಕಂಡುಬಂತು.ಹೊಸ ಹೊಸ ನಿಯಮಗಳನ್ನು ರೂಪಿಸಿ ವಿದ್ಯಾರ್ಥಿಗಳಿಗೆ ತೊಂದರೆ ನೀಡುತ್ತಿರುವ ಇಲಾಖೆ ನಿಯಮಗಳನ್ನು ರೂಪಿಸುವಾಗ ಅದಕ್ಕೆ ಸರಿಯಾದ ಅಗತ್ಯವ್ಯವಸ್ಥೆಗಳ ಕುರಿತು ಗಮನಹರಿಸುವ ಅಗತ್ಯವಿದೆ ಎಂದು ವಿದ್ಯಾರ್ಥಿಗಳು ಹಾಗೂ ಪೋಷಕರು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here