Site icon Suddi Belthangady

ಪೆರೋಡಿತ್ತಾಯಕಟ್ಟೆ ಶಾಲೆಗೆ ಬ್ಯಾರಿಕೇಡ್ ಕೊಡುಗೆ

ಪೆರೋಡಿತ್ತಾಯಕಟ್ಟೆ: ಶಾಲಾ ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ, ವಾರ್ಷಿಕೋತ್ಸವ ಸಮಿತಿ ಹಾಗೂ ಊರ ವಿದ್ಯಾಭಿಮಾನಿಗಳ ನೇತೃತ್ವದಲ್ಲಿ ಮಾ.09ರಂದು ಪೆರೋಡಿತ್ತಾಯಕಟ್ಟೆ ಶಾಲೆಗೆ ಬ್ಯಾರಿಕೇಡ್ ಅನ್ನು ಕೊಡುಗೆಯಾಗಿ ನೀಡಲಾಯಿತು.

ಶಾಲಾ ಆವರಣದ ಎದುರು ಹೆದ್ದಾರಿಯಲ್ಲಿ ಸಣ್ಣ ಪುಟ್ಟ ಅವಘಡಗಳು ಸಂಭವಿಸುತ್ತಿದ್ದು, ಇದರ ಮುಂಜಾಗ್ರತ ಕ್ರಮವಾಗಿ ಬ್ಯಾರಿಕೇಡ್ ನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ ಶೆಟ್ಟಿ ಅಲಿಮಾರ್, ಗ್ರಾ.ಪಂ ಸದಸ್ಯರಾದ ನಿಝಾಮುದ್ದೀನ್, ಪ್ರಸನ್ನ, ಎಸ್.ಡಿ.ಎಂ.ಸಿ ಅಧ್ಯಕ್ಷ ರಘುನಾಥ, ಸದಸ್ಯರು, ಊರ ವಿದ್ಯಾಭಿಮಾನಿಗಳು, ಶಾಲಾ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು, ಅಡುಗೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

Exit mobile version