ಬೆಳ್ತಂಗಡಿ: ದೇಶದ 18ನೇ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ.
ತಕ್ಷಣದಿಂದಲೇ ದೇಶಾದ್ಯಂತ ನೀತಿ ಸಂಹಿತೆ ಜಾರಿಯಾಗಿದೆ.
ಕರ್ನಾಟಕದಲ್ಲಿ ಎರಡು ಹಂತದ ಚುನಾವಣೆ ನಡೆಯಲಿದ್ದು ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ, ಮಂಗಳೂರು, ಮಂಗಳೂರು ಉತ್ತರ, ಮಂಗಳೂರು ದಕ್ಷಿಣ ಮತ್ತು ಮೂಡಬಿದ್ರೆ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಎಪ್ರಿಲ್ 26ರಂದು ಮತದಾನ ನಡೆಯಲಿದೆ ಜೂ.4ರಂದು ಮತ ಎಣಿಕೆ ನಡೆದು ಅಂದು ಮಧ್ಯಾಹ್ನದ ವೇಳೆ ಫಲಿತಾಂಶ ಪ್ರಕಟವಾಗಲಿದೆ.
ಕೇಂದ್ರ ಚುನಾವಣಾ ಆಯುಕ್ತ ರಾಜೀವ ಕುಮಾರ್ ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ವಿವರ ನೀಡಿದ್ದು ರಾಷ್ಟದಲ್ಲಿ ಏಳು ಹಂತಗಳಲ್ಲಿ ಮತದಾನ ನಡೆಯಲಿದೆ ಎಂದು ತಿಳಿಸಿದ್ದಾರೆ.
p>