ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮಾ.16ರಂದು ಬ್ಯಾಂಕಿಂಗ್ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು.
ಬೆಳ್ತಂಗಡಿಯ ಆರ್ಥಿಕ ಸಾಕ್ಷರತಾ ಕೇಂದ್ರದ ಸಂಪನ್ಮೂಲ ವ್ಯಕ್ತಿ ಹಾಗೂ ಉಪನ್ಯಾಸಕಿ ಉಷಾ ಕಾಮತ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.
ಸೇವಿಂಗ್ಸ್ ಅಕೌಂಟ್, ಕರೆಂಟ್ ಅಕೌಂಟ್, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಇತ್ಯಾದಿ ವಿಷಯಗಳ ಬಗ್ಗೆ ಅವರು ತಿಳಿಸಿದರು. ರಾಷ್ಟ್ರೀಯ ಬ್ಯಾಂಕ್ ಗಳಲ್ಲಿ ಯಾವ ರೀತಿ ಹೂಡಿಕೆ ಮಾಡಬಹುದು, ಹೂಡಿಕೆ ಮಾಡುವಾಗ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ, ಅಟಲ್ ಪಿಂಚಣಿ ಯೋಜನೆ, ಪ್ರದಾನ ಮಂತ್ರಿ ಶ್ರಮ್ ಯೋಗಿ ಯೋಜನೆ, ಸ್ಟ್ಯಾಂಡ್ ಅಪ್ ಇಂಡಿಯಾ – ಸ್ಟಾರ್ಟ್ ಅಪ್ ಇಂಡಿಯಾ, ಸ್ವ ಉದ್ಯೋಗ ಮಾಡಲು ಬ್ಯಾಂಕ್ ಸಹಾಯ, ಮಹಿಳಾ ಶ್ರಮ ಶಕ್ತಿ ಯೋಜನೆ ಮುಂತಾದ ವಿಚಾರಗಳ ಕುರಿತು ಚರ್ಚಿಸಿದರು.
ಸ್ಮಾರ್ಟ್ ಸೇವಿಂಗ್ಸ್, ಪಿಂಚಣಿ, ಇನ್ಶೂರೆನ್ಸ್ ಅಷ್ಟೇ ಅಲ್ಲದೆ, ಪೋಸ್ಟ್ ಆಫೀಸ್ ಸ್ಕೀಮ್ ಗಳಾದ ಎಂ.ಐ.ಎಸ್. ಹಾಗೂ ಎಂ.ಐ.ಎಸ್.ಎಸ್. ಸ್ಕೀಂ ಗಳ ಕುರಿತು ಮಾಹಿತಿ ನೀಡಿದರು.
ವೇದಿಕೆಯಲ್ಲಿ ಮಂಗಳೂರಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದ ಅಧಿಕಾರಿ ಮಂಜೂಷಾ ಪಿ. ಮತ್ತು ಉಜಿರೆ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ದಿವ್ಯ ಉಪಸ್ಥಿತರಿದ್ದರು.
ಇನ್ನೋರ್ವ ಕಿರಿಯ ತರಬೇತಿ ಅಧಿಕಾರಿ ಸಂಧ್ಯಾ ಕಾರ್ಯಕ್ರಮ ನಿರೂಪಿಸಿದರು.