Site icon Suddi Belthangady

ಬೆಳ್ತಂಗಡಿ: ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ನಿವೃತ್ತರಾದ ಡಾ.ಕೆ.ಜಯಕೀರ್ತಿ ಜೈನ್ ರವರಿಗೆ ಸನ್ಮಾನ

ಬೆಳ್ತಂಗಡಿ: ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಡಾ.ಕೆ. ಜಯಕೀರ್ತಿ ಜೈನ್ ರವರು ಸರಕಾರಿ ಸೇವೆಯಿಂದ ನಿವೃತ್ತಿಯಾಗಿದ್ದು ಇಂದು ಸಹಕಾರಿ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀ ಚಿದಾನಂದ ಎಸ್. ಹೂಗಾರ್ ಅಧ್ಯಕ್ಷತೆ ವಹಿಸಿದ್ದು ಮುಖ್ಯ ಅತಿಥಿಗಳಾಗಿ ವಲಯ ಅರಣ್ಯಾಧಿಕಾರಿ ಮೋಹನ್ ಕುಮಾರ್, ನಿವೃತ್ತ ಸರಕಾರಿ ನೌಕರರ ಸಂಘದ ಅಧ್ಯಕ್ಷ ವಿಠಲ ಶೆಟ್ಟಿ, ನಿವೃತ್ತ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸಿ.ಆರ್. ನರೇಂದ್ರ ಕುಮಾರ್ ಮಂಗಳೂರು, ಉದ್ಯಮಿ ನಾಣ್ಯಪ್ಪ ಪೂಜಾರಿ, ತಾಲೂಕು ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ಆಡಳಿತಾಧಿಕಾರಿ ಡಾ.ಚಂದ್ರಕಾಂತ್, ಸಹಕಾರಿ ಅಭಿವೃದ್ಧಿ ಅಧಿಕಾರಿ ಪ್ರತಿಮಾ, ಕಾನೂನು ಸಲಹೆಗಾ ರರಾದ ನ್ಯಾಯವಾದಿ ಶಶಿಕಿರಣ್ ಜೈನ್, ಪಶು ಸಂಗೋಪನಾ ಇಲಾಖೆಯ ಮುಖ್ಯ ಆಡಳಿತ ಪಶು ವೈದ್ಯಾಧಿಕಾರಿ ಡಾ.ರವಿ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಜಯಕೀರ್ತಿ ಜೈನ್ ರವರು ನಮ್ಮ ಸಹಕಾರಿ ಸಂಘವು ಪ್ರಾರಂಭವಾಗಿ 15 ವರ್ಷಗಳಾಗಿದ್ದು ಇದೀಗ ಸಹಕಾರಿ ಸಂಘವನ್ನು ಜಿಲ್ಲಾ ಮಟ್ಟಕ್ಕೆ ಕೊಂಡೊಯ್ಯುವುದಾಗಿ ಹಾಗೂ ಎಲ್ಲರ ಸಹಕಾರದಿಂದ ಇಂದು ಉತ್ತಮ ಸಹಕಾರಿ ಸಂಘವಾಗಿ ಬೆಳೆದು ಬಂದಿದೆ ಎಂದು ತಿಳಿಸಿದರು. ನಿತ್ಯ ನಿಧಿ ಠೇವಣಿ ಸಂಗ್ರಾಹಕರು ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನೆ ನಡೆಯಿತು.

ಸಭೆಯಲ್ಲಿ ನಿರ್ದೇಶಕರಾದ ಜಯರಾಜ್ ಜೈನ್, ಅಬ್ದುಲ್ ರಝಾಕ್, ಆರತಿ, ವಾರಿಜ ಕೆ., ಪ್ರಶಾಂತ್ ಕುಮಾರ್, ಪರಮೇಶ್ ಟಿ., ರತ್ನಾವತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವತ್ಸಲಾ ಜ್ಯೋತಿರಾಜ್, ಶಾಖಾ ಪ್ರಬಂಧಕ ಅತಿಶಯ್ ಜೈನ್, ವಿಶಾಲ, ಕಾನೂನು ಸಲಹೆಗಾರ ರಾದ ನ್ಯಾಯವಾದಿ ಶಿವಯ್ಯ, ಸಾಲ ವಸೂಲಾತಿಗಾರ ನಿರ್ಮಲ್ ಕುಮಾರ್ ಜೈನ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಉಸ್ತುವಾರಿಯನ್ನು ಸಲಹೆಗಾರ ವಸಂತ ಸುವರ್ಣ ವಹಿಸಿದ್ದರು.

ಸಹಕಾರಿ ಸಂಘದ ನಿರ್ದೇಶಕ ಚಂದ್ರಶೇಖರ ಸ್ವಾಗತಿಸಿ, ನಿರ್ದೇಶಕಿ ಹೇಮಲತಾ ವಂದಿಸಿದರು.ಶಿಕ್ಷಣ ಇಲಾಖೆಯ ಸಿ.ಆರ್.ಪಿ. ರಾಜೇಶ್ ರವರು ಕಾರ್ಯಕ್ರಮ ನಿರೂಪಿಸಿದರು.

Exit mobile version