Site icon Suddi Belthangady

ಉಜಿರೆ: ಮುಂಡತೋಡಿ ಶಾಲೆಯಲ್ಲಿ ನೂತನ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

ಉಜಿರೆ: ಮುಂಡತೋಡಿ ಪೆರ್ಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾ.13ರಂದು ಹಿರಿಯ ವಿದ್ಯಾರ್ಥಿಗಳ ಸಭೆ ನಡೆದು ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಶಿವಪ್ರಸಾದ್, ಉಪಾಧ್ಯಕ್ಷರಾಗಿ ಮೀನಾಕ್ಷಿ, ಕಾರ್ಯದರ್ಶಿಯಾಗಿ ವಸಂತ ಪೆರ್ಲ ಹಾಗೂ ಜೊತೆ ಕಾರ್ಯದರ್ಶಿಯಾಗಿ ವೀರೇಶ್ ಇವರನ್ನು ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಅಧ್ಯಾಪಕರು ಉಪಸ್ಥಿತರಿದ್ದರು.

ವಸಂತ ಸ್ವಾಗತಿಸಿ, ಶಿವಪ್ರಸಾದ್ ಧನ್ಯವಾದವಿತ್ತರು, ಮೀನಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

Exit mobile version