Site icon Suddi Belthangady

ಕಕ್ಯಪದವು: ಎಲ್‌ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಕಕ್ಯಪದವು: ಎಲ್.ಸಿ.ಆರ್ ವಿದ್ಯಾಸಂಸ್ಥೆ ಕಕ್ಯಪದವು ಇಲ್ಲಿನ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಒಂಬತ್ತನೇ ತರಗತಿ ವಿದ್ಯಾರ್ಥಿಗಳು ಬೀಳ್ಕೊಡುಗೆ ಸಮಾರಂಭವನ್ನು ಮಾ.07ರಂದು ಏರ್ಪಡಿಸಿದರು.

ವಿದ್ಯಾಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೊ ಉಪಸ್ಥಿತರಿದ್ದು, ಪ್ರೇರಣಾತ್ಮಕ ಮಾತುಗಳಿಂದ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಸಂಸ್ಥೆಯ ಸಂಯೋಜಕ ಯಶವಂತ್ ಜಿ.ನಾಯಕ್ ಉಪಸ್ಥಿತರಿದ್ದು, ಧನತ್ಮಾಕ ಮಾತುಗಳಿಂದ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಸಿದರು.

ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಕು.ವಿಜಯಾ ಕೆ ಇವರು ಉಪಸ್ಥಿತರಿದ್ದು ವಿದ್ಯಾರ್ಥಿಗಳ ಪರೀಕ್ಷೆ ಮತ್ತು ಮುಂದಿನ ವಿದ್ಯಾಭ್ಯಾಸಕ್ಕೆ ಶುಭಹಾರೈಸಿದರು.

ಒಂಬತ್ತನೇ ತರಗತಿ ನಿಶಾ ಇವರು ಸ್ವಾಗತಿಸಿ, ಫಾತಿಮತ್ ಮುಝೈನಾ ವಂದಿಸಿ, ಅನ್ವಿತ. ಎಮ್ ಮತ್ತು ಪ್ರಾರ್ಥನಾ. ಎಚ್.ಕೆ ಕಾರ್ಯಕ್ರಮ ನಿರೂಪಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿವಿಧ ಮನೋರಂಜನಾ ಆಟೋಟ ಸ್ಪರ್ಧೆಗಳನ್ನು ಆಯೋಜಿಸಿದರು.

Exit mobile version