ಬೆಳ್ತಂಗಡಿ: ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಉಸ್ತುವಾರಿಗಳ ನೇಮಕ

0

ಬೆಳ್ತಂಗಡಿ: ಲೋಕಸಭಾ ಚುನಾವಣೆಗೆ ಪಕ್ಷದ ಮುಖಂಡರುಗಳ ಪ್ರಚಾರ ಕಾರ್ಯಕ್ರಮಗಳನ್ನು ಆಯೋಜಿಸಲು ಹಾಗೂ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು, ಪೂರ್ಣ ಜವಬ್ದಾರಿಯನ್ನು ನಿರ್ವಹಿಸಲು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳನ್ನು ನೇಮಕಗೊಳಿಸಿದೆ.

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಉಸ್ತುವಾರಿಯಾಗೊ ಮಾಜಿ. ಜಿ.ಪಂ. ಉಪಾಧ್ಯಕ್ಷ ಧರಣೇಂದ್ರ ಕುಮಾರ್ ಹೊಸಂಗಡಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಉಸ್ತುವಾರಿಯಾಗಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್ ಉಜಿರೆ ಹಾಗೂ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿ ಉಸ್ತುವಾರಿಯಾಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯರಾಗಿ ಶುಭಾಶ್ಚಂದ್ರ ರೈ ಪಡ್ಯೋಡಿಗುತ್ತು ನೇಮಕಗೊಂಡಿದ್ದಾರೆ ಎಂದು ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here