Site icon Suddi Belthangady

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಕ್ರಾಸ್ ಸಂಸ್ಥೆ ಬೆಂಗಳೂರು ಹಾಗೂ ಸ್ನೇಹ ಕಿರಣ್ ಮಹಿಳಾ ಒಕ್ಕೂಟ ನೇತೃತ್ವದಲ್ಲಿ ಲಿಂಗ ಸಮಾನತೆ ಬಗ್ಗೆ ತರಬೇತಿ

ಬೆಳ್ತಂಗಡಿ: ಶಕ್ತಿ ಸಾಮರ್ಥ್ಯವನ್ನು ಬೆಳೆಸಿದಾಗ ನಾವು ಕೂಡ ಬೆಳೆಯುತ್ತೇವೆ.ಸಮಾಜದಲ್ಲಿ ಬದಲಾವಣೆ ನಮ್ಮಿಂದ ಆಗಬೇಕಾಗಿದೆ ಎಂದು ಮಾ.20ರಂದು ಬೆಳ್ತಂಗಡಿಯ ಸಾಂತೋಮ್ ಟವರ್ ನಲ್ಲಿ ಆಯೋಜಿಸಿದ ಲಿಂಗ ಸಮಾನತೆ ಬಗ್ಗೆ ತರಬೇತಿ ಕಾರ್ಯಾಗಾರದಲ್ಲಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕ ವಂ.ಫಾ.ಬಿನೋಯಿ ಎ.ಜೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ಅಧ್ಯಕ್ಷೆ ಎಲಿಯಮ್ಮ ತೋಮಸ್ ಅಧ್ಯಕ್ಷತೆ ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಗಳಾಗಿ ಸಿ. ನ್ಯಾನ್ಸಿ ಲೋಬೊ, ಮಹಿಳಾ ಸಬಲೀಕರಣ ಯೋಜನೆಯ ರಾಜ್ಯ ಸಂಯೋಜಕರು, ಕ್ರಾಸ್ ಸಂಸ್ಥೆ ಬೆಂಗಳೂರು ಇವರು ಲಿಂಗ ಸಮಾನತೆ ಮತ್ತು ಲಿಂಗತ್ವದ ವಿಚಾರಗಳ ಬಗ್ಗೆ ತರಬೇತಿ ನೀಡಿದರು. ಮಹಿಳಾ ಒಕ್ಕೂಟ ಮತ್ತು ಮಹಾಸಂಘ ಸದಸ್ಯರು ಹಾಗೂ ಸಂತ ಎಲೋಶಿಯಸ್ ಕಾಲೇಜು ಮಂಗಳೂರು ಮತ್ತು ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜ ಕಾರ್ಯ ವಿಭಾಗ ವಿಧ್ಯಾರ್ಥಿಗಳು ಡಿ.ಕೆ.ಆರ್.ಡಿ.ಎಸ್ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

ಜಿಲ್ಲಾ ಒಕ್ಕೂಟದ ಕಾರ್ಯದರ್ಶಿ ಡೈಸಿ ಜೋಯ್ ಎಲ್ಲರನ್ನು ಸ್ವಾಗತಿಸಿದರು.ಜೊತೆ ಕಾರ್ಯದರ್ಶಿ ಲಲಿತಾ ವಂದಿಸಿದರು.ಕಾರ್ಯಕರ್ತರಾದ ಮಾರ್ಕ್ ಡಿ ಸೋಜ ಕಾರ್ಯಕ್ರಮ ನಿರೂಪಿಸಿದರು.

Exit mobile version