ಬೆಳ್ತಂಗಡಿ: ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಉಜಿರೆ ದ.ಕ.ಜಿ.ಪಂ.ಹಿ.ಪ್ರಾಥಮಿಕ ಶಾಲೆ ದೊಂಪದಪಲ್ಕೆಯಲ್ಲಿ ನಡೆಸಲಾಯಿತು.
ರಾಷ್ಟ್ರವನ್ನು ಕಟ್ಟುವ ಶಕ್ತಿಯನ್ನು ಸೃಷ್ಟಿಸುವುದು ಶಿಕ್ಷಣದ ಉದ್ದೇಶ.ಶಿಕ್ಷಕರು ಜೀವನಪೂರ್ತಿ ಸ್ವಯಂ ಕಲಿಕೆ ಮಾಡುವ ವಿದ್ಯಾರ್ಥಿಗಳನ್ನು ಸೃಷ್ಟಿಸಬೇಕೆಂದು ಕಾರ್ಯಕ್ರಮವನ್ನು ದೊಂಪದಪಲ್ಕೆ ದ.ಕ.ಜಿ.ಪಂ.ಹಿ.ಪ್ರಾ ಶಾಲೆಯ ಮುಖ್ಯೊಪಾಧ್ಯಾಯ ಸುರೇಶ್ ಆಚಾರ್ಯ ಉದ್ಘಾಟಿಸಿ, ಬದುಕಿನ ಜೀವನ ಎಲ್ಲವನ್ನು ಕಲಿಸುತ್ತದೆ.ಏನ್.ಎಸ್.ಎಸ್ ಎಂದರೆ ನಾನು ಸದಾ ಸಿದ್ಧ ಮತ್ತು ನಾನು ಶಿಸ್ತಿನ ಸಿಪಾಯಿ ಎಂದು ಅರ್ಥೈಸಬಹುದು, ಪ್ರಜಾಪ್ರಭುತ್ವ ದೇಶದಲ್ಲಿ ಬದುಕುವ ಹಾಗೆ ನಿಸ್ವಾರ್ಥ ಸೇವೆಯಲ್ಲಿ ಮತ್ತು ಬೇರೆ ವ್ಯಕ್ತಿಗಳೊಂದಿಗೆ ಮೆಚ್ಚುಗೆಯಾಗಿ ಗುರುತಿಸಿಕೊಂಡು ಮಾನವೀಯತೆಯನ್ನು ಎತ್ತಿ ತೋರಿಸುವ ಅಗತ್ಯವನ್ನು ಕಲ್ಪಿಸುತ್ತದೆ ಎಂದು ಮೋಹನ್ ಗೌಡ ಕಲ್ಮಂಜ, ಆಡಳಿತ ನಿರ್ದೇಶಕರು, ಕರ್ನಾಟಕ ಆರ್ಗನಿಕ್ ಫೌಂಡೇಶನ್ ಮಂಗಳೂರು ಇವರ ಕಾರ್ಯಕ್ರಮದ ಕುರಿತು ಮಾತನಾಡಿದರು.
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಡಾ. ಸವಿತಾ ವಹಿಸಿದ್ದರು.
ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ಪ್ರಮಾಣ ವಚನ ಬೋಧಿಸಿದರು.
ವೇದಿಕೆಯಲ್ಲಿ ಸೀತಾರಾಮ ಶೆಟ್ಟಿ, ಅಧ್ಯಕ್ಷರು ಶ್ರೀ ವ್ಯಾಘ್ರ ಚಾಮುಂಡಿ ಸೇವಾ ಟ್ರಸ್ಟ್ ಓಡಲ, ಜಮನ ಕೆ.ಎಸ್, ಮುಖ್ಯೋಪಾಧ್ಯಾಯರು ಬದನಾಜೆ ಸರಕಾರಿ ಪ್ರೌಢಶಾಲೆ, ಬಿ.ಎ.ಶಮೀಯುಲ್ಲಾ, ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಉಪಸ್ಥಿತರಿದ್ದರು.
ವಾಣಿಜ್ಯ ವಿಭಾಗದ ಉಪನ್ಯಾಸಕಿ ಪವಿತ್ರ ಕಾರ್ಯಕ್ರಮ ನಿರೂಪಿಸಿದರು.ರಾಷ್ಟ್ರೀಯ ಸೇವಾ ಯೋಜನೆ ಯೋಜನಾಧಿಕಾರಿ ಬಿ.ಎ.ಶಮೀಯುಲ್ಲಾ ಸ್ವಾಗತಿಸಿದರು.ಇತಿಹಾಸ ವಿಭಾಗದ ಉಪನ್ಯಾಸಕಿ ಅಂಬಿಕ ವಂದಿಸಿದರು.