Site icon Suddi Belthangady

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಅಲ್ಪಸಂಖ್ಯಾತ ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ವಿಭಾಗದ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ ನಗರ ಮತ್ತು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರುಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾ ಅಧ್ಯಕ್ಷ ಶಾಹುಲ್ ಹಮೀದ್ ಕೆ.ಕೆ ಇವರು ನೇಮಕ ಮಾಡಿದ್ದಾರೆ.

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಜಿಲ್ಲಾ ಅರೋಗ್ಯ ರಕ್ಷಾ ಸಮಿತಿಯ ಸದಸ್ಯರು ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್‌ ಕರೀಮ್ ಗೇರುಕಟ್ಟೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ, ಕರ್ನಾಟಕ ಸಿರೋ ಮಲಬಾರ್ ಕ್ರಿಶ್ಚಿಯನ್ ಅಸೋಸಿಯೇಷನ್ (KSMCA ) ಧರ್ಮಸ್ಥಳ ವಲಯದ ಅಧ್ಯಕ್ಷರಾದ ಜೈಸನ್ ಪಿ. ಎಸ್ ನೇಮಕಗೊಂಡಿದ್ದಾರೆ.

Exit mobile version