ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ ಶಾಲೆ ಶಿಕ್ಷಕಿ ರಾಜ್ಯ ಮಟ್ಟಕ್ಕೆ ಆಯ್ಕೆ

0

ಕೊಕ್ರಾಡಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮಂಗಳೂರು ಇವರ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಯೋಗಾಸನ ಕ್ರೀಡಾಕೂಟ ಸ್ಪರ್ಧೆಯಲ್ಲಿ ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆಯ ಕನ್ನಡ ಭಾಷಾ ಶಿಕ್ಷಕಿ ಅಕ್ಕಮ್ಮ ಇವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಾಂಪ್ರದಾಯಕ ಯೋಗಾಸನ ಸ್ಪರ್ಧೆ ವೈಯಕ್ತಿಕ ಚಾಂಪಿಯನ್ ಶಿಪ್ ಪ್ರಥಮ ಸ್ಥಾನ, ಕಲಾತ್ಮಕ ವೈಯಕ್ತಿಕ ಯೋಗಾಸನ ಸ್ಪರ್ಧೆ ಪ್ರಥಮ ಸ್ಥಾನ, ಸಂಯೋಜನೆಗಳ ವೈಯಕ್ತಿಕ ಯೋಗಾಸನ ಸ್ಪರ್ಧೆ ಪ್ರಥಮ ಸ್ಥಾನ, ಜಾನಪದ ಗೀತೆ ಯಲ್ಲಿ ಬೆಳ್ತಂಗಡಿ ತಂಡ ಪ್ರಥಮ ಸ್ಥಾನದೊಂದಿಗೆ ಇವರು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.‌

LEAVE A REPLY

Please enter your comment!
Please enter your name here