ಬೆಳ್ತಂಗಡಿ: ಲಾಯಿಲ ಮತ್ತು ನಗರ ಮಹಾ ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆ ಮಾ.24ರಂದು ಲಾಯಿಲ ಸಂಗಮ ಸಭಾಭವನದಲ್ಲಿ ನಡೆಯಿತು. ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಪಕ್ಷದ ಅಭಿವೃದ್ಧಿ ಕಾರ್ಯಗಳನ್ನು ತಿಳಿಸಿದರು.
ಪ್ರಮುಖರಾದ ಹರಿಕೃಷ್ಣ ಬಂಟ್ವಾಳ, ಮಂಡಲ ಅಧ್ಯಕ್ಷ ಶ್ರೀನಿವಾಸನ್ ರಾವ್ , ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಹಾಗೂ ಜಯಾನಂದ ಗೌಡ, ಲಾಯಿಲ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರಕಾಶ್ ಜೈನ್, ಪ್ರಧಾನ ಕಾರ್ಯದರ್ಶಿ ಅರವಿಂದ ಲಾಯಿಲ, ಬೆಳ್ತಂಗಡಿ ನಗರ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ಪ್ರಭು, ಪ್ರಧಾನ ಕಾರ್ಯದರ್ಶಿ ಶರತ್, ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಣೇಶ್ ಹಾಗೂ ಸೀತಾರಾಮ ಬೆಳಾಲು ಸಹಿತ ಪ್ರಮುಖರು ಉಪಸ್ಥಿತರಿದ್ದರು.