ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

0

ಬೆಳ್ತಂಗಡಿ: ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟರವರು ಮಾ.24ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಮಾಡಿದರು. ಬಳಿಕ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಹರ್ಷೇಂದ್ರ ಕುಮಾರ್ ರವರನ್ನು ಭೇಟಿ ಮಾಡಿದರು.

ಶಾಸಕ ಹರೀಶ್ ಪೂಂಜ, ಜಿಲ್ಲಾ ಉಪಾಧ್ಯಕ್ಷ ಜಯಂತ ಕೋಟ್ಯಾನ್, ಹರಿಕೃಷ್ಣ ಬಂಟ್ವಾಳ, ಮಂಡಲ ಅಧ್ಯಕ್ಷ ಶ್ರೀನಿವಾಸನ್ ರಾವ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಹಾಗೂ ಜಯಾನಂದ ಗೌಡ, ಯುವ ಮೋರ್ಚಾದ ಶಶಿರಾಜ್ ಶೆಟ್ಟಿ, ರಕ್ಷಿತ್ , ಗಣೇಶ್ ನಾವೂರು, ಸೀತಾರಾಮ ಬೆಳಾಲು ಸಹಿತ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here