ಉಜಿರೆ: ಹಳೆಪೇಟೆ ಸರಕಾರಿ ಶಾಲೆ ಉಳಿಸಿ ಬೆಳೆಸಿ ಬದುಕು ಕಟ್ಟೋಣ ತಂಡದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಹೇಮಾವತಿ ವಿ.ಹೆಗ್ಗಡೆ

0

ಉಜಿರೆ: ಉಜಿರೆ ಹಳೆಪೇಟೆ ಸರಕಾರಿ ಶಾಲೆ ಉಳಿಸಿ ಬೆಳೆಸಿ ಕಾರ್ಯಕ್ರಮದಡಿ ಬದುಕು ಕಟ್ಟೋಣ ತಂಡದ ಕಾರ್ಯವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಹೇಮಾವತಿ ವಿ.ಹೆಗ್ಗಡೆಯವರು ಭೇಟಿ ನೀಡಿ ಬದುಕು ಕಟ್ಟೋಣ ಬನ್ನಿ ತಂಡದ ಸೇವೆ ಶ್ಲಾಘನೀಯ, ಇದು ನಿಜವಾದ ಸಮಾಜಸೇವೆ ಎಂದರು.

ಕಳೆದ ಒಂದೂವರೆ ತಿಂಗಳ ಹಿಂದೆ ಶಾಲೆಯನ್ನು ಶ್ರಮದಾನ ಮುಖಾಂತರ ಶಾಲೆಗೆ ಸುಣ್ಣ ಬಣ್ಣ ಹಚ್ಚಿ ಶೃಂಗಾರ ಗೊಳಿಸಲಾಗಿದೆ.ನಿಟ್ಟಿನಲ್ಲಿ ಬದುಕು ಕಟ್ಟೋಣ ಬನ್ನಿ ತಂಡ ಹಾಗೂ ಇತರ ಸಂಘ ಸಂಸ್ಥೆಗಳು ಸೇರಿ ಶಾಲೆಯಲ್ಲಿ ಶ್ರಮದಾನದ ಮೂಲಕ ಕೆಲಸ ಪ್ರಾರಂಭಿಸಲಾಗಿತ್ತು. ಕೆಲಸ ಪ್ರಾರಂಭಿಸಿ 50 ದಿನಗಳು ಮುಗಿಯುವಷ್ಟರಲ್ಲಿ ಹೆಚ್ಚಿನ ಕೆಲಸಗಳು ನಡೆದಿದೆ.ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್‌ ಕುಮಾರ್ ನೇತೃತ್ವದಲ್ಲಿ ಎಸ್‌.ಡಿ.ಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಎಸ್.ಡಿ.ಎಂ ಸ್ಪೋರ್ಟ್ಸ್ ವಿದ್ಯಾರ್ಥಿಗಳು, ಬದುಕು ಕಟ್ಟೋಣ ಬನ್ನಿ ತಂಡದ ಸದಸ್ಯರು ಶಾಲೆಯಲ್ಲಿ ಶ್ರಮದಾನ ನಡೆಸಿದರು.

ಈ ಸಂದರ್ಭದಲ್ಲಿ ಪೂರನ್ ವರ್ಮ,ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ರಾಜೇಶ್ ಪೈ, ರೋಟರಿ ಕ್ಲಬ್ ಅಧ್ಯಕ್ಷ ಅನಂತ್‌ ಭಟ್ ಮಚ್ಚಿಮಲೆ, ಕಾರ್ಯದರ್ಶಿ ವಿದ್ಯಾಎಸ್‌.ಡಿ.ಎಂ ದೈಹಿಕ ಶಿಕ್ಷಣ ಶಿಕ್ಷಕ ರಮೇಶ್‌, ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here