ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ರಾತ್ರಿ ಧರ್ಮಸ್ಥಳಕ್ಕೆ ಆಗಮನ, ನಾಳೆ ದೇವರಿಗೆ ಪೂಜೆ

0

ಬೆಳ್ತಂಗಡಿ: ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ಮಾ.25ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ಬೆಂಗಳೂರಿನಿಂದ ವಿಮಾನದ ಮೂಲಕ ರಾತ್ರಿ 10.55ಕ್ಕೆ ಮಂಗಳೂರು ತಲುಪಲಿದ್ದು, ಮಧ್ಯರಾತ್ರಿ 1 ಗಂಟೆಗೆ ಧರ್ಮಸ್ಥಳಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು.ಮಾ.26ರಂದು ಬೆಳಗ್ಗೆ 8 ಗಂಟೆಗೆ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ.ನಂತರ ಹೆಲಿಕಾಪ್ಟರ್ ಮೂಲಕ 9.30ಕ್ಕೆ ಧರ್ಮಸ್ಥಳದಿಂದ ನಿರ್ಗಮಿಸುವರು.

ಬೆಳಗ್ಗೆ 10 ಗಂಟೆಗೆ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಆಗಮನ. ಅಲ್ಲಿ ದೇವಸ್ಥಾನದಲ್ಲಿ ಪೂಜೆಯ ಬಳಿಕ ಹೆಲಿಕಾಪ್ಟರ್ ಮೂಲಕ ಶೃಂಗೇರಿಗೆ ಪ್ರಯಾಣಿಸುವರು. ಶೃಂಗೇರಿ ಶ್ರೀ ಶಾರದಾಂಬಾ ದೇವಸ್ಥಾನದಲ್ಲಿ ಪೂಜೆಯ ಬಳಿಕ ಅಪರಾಹ್ನ 3.30ಕ್ಕೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ.

LEAVE A REPLY

Please enter your comment!
Please enter your name here