

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಾಲ್ಕು ದಿನದ ಬೇಸಿಗೆ ಶಿಬಿರಕ್ಕೆ ದೀಪ ಪ್ರಜ್ವಲನೆಯೊಂದಿಗೆ ಮಾ.25ರಂದು ಚಾಲನೆ ನೀಡಲಾಯಿತು.
ಕ್ರಾಫ್ಟ್, ಕರಕುಶಲ ವಸ್ತುಗಳ ತಯಾರಿಕೆ, ಅಭಿನಯ ಗೀತೆ, ನೃತ್ಯ ಮುಂತಾದ ಚಟುವಟಿಕೆಗಳಲ್ಲಿ ಮಕ್ಕಳನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಲಾಯಿತು.
ಮುಖ್ಯ ಶಿಕ್ಷಕಿ ಮತ್ತು ಶಿಕ್ಷಕ ವೃಂದದವರ ಮಾರ್ಗದರ್ಶನ ಮತ್ತು ಸಹಕಾರದೊಂದಿಗೆ ಬೇಸಿಗೆ ಶಿಬಿರ ನೆರವೇರಿತು.