ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಳಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್

0

ಬೆಳ್ತಂಗಡಿ: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಬುಧವಾರ ಬೆಳಿಗ್ಗೆ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ತೆರಳಿ, ಪ್ರಾರ್ಥನೆ ಸಲ್ಲಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಕೆಪಿಸಿಸಿ ಮಾಜಿ ಉಪಾಧ್ಯಕ್ಷ ಪಿತಾಂಬರ ಹೇರಾಜೆ, ಬ್ಲಾಕ್ ನಗರ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಗ್ರಾಮೀಣ ಅಧ್ಯಕ್ಷ ಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಂದನಾ ಭಂಡಾರಿ, ಬೆಳ್ತಂಗಡಿ ಚುನಾವಣಾ ಉಸ್ತುವಾರಿಗಳಾದ ಧರ್ಣೇಂದ್ರ ಕುಮಾರ್, ರಜತ್ ಗೌಡ, ಸುಭಾಶ್ ರೈ, ಮಾಲಾಡಿ ಗ್ರಾಪಂ ಅಧ್ಯಕ್ಷ ಪುನೀತ್ ಕುಮಾರ್ ಮಾಲಾಡಿ, ಶೇಖರ್ ಕುಕ್ಕೇಡಿ, ಮನೋಹರ್ ಇಳಂತಿಲ, ಪದ್ಮನಾಭ ಸಾಲ್ಯಾನ್ ಮಾಲಾಡಿ ಸೇರಿದಂತೆ ನಾಯಕರು ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here