ಮಾ.30: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ವಾರ್ಷಿಕೋತ್ಸವ, ಯಶೋವನ ಉದ್ಘಾಟನೆ

0

ಉಜಿರೆ: ಉಜಿರೆಯ ಎಸ್.ಡಿ.ಎಂ ಕಾಲೇಜಿನ ವಾರ್ಷಿಕೋತ್ಸವವು ಮಾ.30ರಂದು ಕಾಲೇಜಿನ ಒಳಾಂಗಣದಲ್ಲಿ ನಡೆಯಲಿದೆ. ಸಂಜೆ 6.30ಕ್ಕೆ ಉದ್ಘಾಟನ ಸಮಾರಂಭ ಆರಂಭಗೊಳ್ಳಲಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಯಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ. ಪಿ.ಎಲ್. ಧರ್ಮ, ಗೌರವ ಅತಿಥಿಗಳಾಗಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್, ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ ಮತ್ತು ಡಾ. ಸತೀಶ್ಚಂದ್ರ ಎಸ್., ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿರಲಿದ್ದಾರೆ. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿವೆ.

ಅದೇ ದಿನ ಬೆಳಗ್ಗೆ 9.30ಕ್ಕೆ ಕಾಲೇಜಿನ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವು ಸಮ್ಯಕ್ ದರ್ಶನ ಸಭಾಂಗಣದಲ್ಲಿ ಜರಗಲಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿ.ಆರ್.ಡಿ.ಒ.)ಯ ಹಿರಿಯ ವಿಜ್ಞಾನಿ ನಿಶ್ಚಿತಾ ಬರ್ಕೆ ಹಾಗೂ ಅಂತಾರಾಷ್ಟ್ರೀಯ ಚೆಸ್ ಆಟಗಾರ ಶಾಬ್ದಿಕ್ ವರ್ಮ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಎ ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ.

ಯಶೋವನ ಉದ್ಘಾಟನೆ: ಅದೇ ದಿನ ಸಂಜೆ 5.45 ಕ್ಕೆ ಕಾಲೇಜಿನ ಸಸ್ಯೋದ್ಯಾನದಲ್ಲಿ ‘ಯಶೋವನ’ದ ಉದ್ಘಾಟನೆಯನ್ನು ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ ನೆರವೇರಿಸಲಿದ್ದಾರೆ. ಡಾ.ಡಿ.ವೀರೇಂದ್ರ ಹೆಗ್ಗಡೆ, ಡಾ.ಹೇಮಾವತಿ ವೀ. ಹೆಗ್ಗಡೆ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಿ.ಹರ್ಷೇಂದ್ರ ಕುಮಾರ್ ಮತ್ತು ಡಾ.ಸತೀಶ್ಚಂದ್ರ ಎಸ್., ಐ.ಟಿ. ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಸಿಇಒ  ಪೂರನ್ ವರ್ಮ, ಸುಪ್ರಿಯಾ ಹರ್ಷೇಂದ್ರ ಕುಮಾರ್, ಸೋನಿಯಾ ಯಶೋವರ್ಮ ಉಪಸ್ಥಿತರಿರಲಿದ್ದಾರೆ.

LEAVE A REPLY

Please enter your comment!
Please enter your name here