ಬೆಳ್ತಂಗಡಿ: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿಶೇಷ ವಾರ್ಷಿಕ ಶಿಬಿರ

0

ಬೆಳ್ತಂಗಡಿ: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ 2023-24ನೇ ಶೈಕ್ಷಣಿಕ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರವು ಮಾ.20 ರಿಂದ 26ರ ವರೆಗೆ ಉಜಿರೆ ದೊಂಪದಪಲಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಇದರ ಸಮರೂಪ ಸಮಾರಂಭವು ಮಾ.26ರಂದು ಶಾಲಾ ಸಭಾಂಗಣದಲ್ಲಿ ನಡೆಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಡಾ.ಸವಿತಾ ಇವರು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಉಜಿರೆ ಕ್ಲಸ್ಟರ್ ಮಟ್ಟದ ಸಂಪನ್ಮೂಲ ವ್ಯಕ್ತಿ ಪ್ರತಿಮಾ, ಓಡಲ ವ್ಯಾಘ್ರ ಚಾಮುಂಡಿ ಸೇವಾ ಟ್ರಸ್ಟ್ ಅಧ್ಯಕ್ಷ ಸೀತಾರಾಮ ಶೆಟ್ಟಿ ಉಪಸ್ಥಿತರಿದ್ದರು.

ಊರಿನ ಹಿರಿಯರಾದ ವಾಸುದೇವ ಭಟ್ ಸುಗುಣ ಸದನ ಶುಭ ಹಾರೈಸಿದರು.ದೊಂಪದಪಲ್ಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಸುರೇಶ ಆಚಾರ್ಯ ಸಮಾರೋಪ ಭಾಷಣವನ್ನು ಮಾಡಿದರು. ಶಿವರಾದಿಧಿಕಾರಿ ಬಿ.ಎ.ಶಮೀ ವುಲ್ಲಾ ಶಿಬಿರದ ಸಮಗ್ರ ವರದಿಯನ್ನು ಮಂಡಿಸಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಪರವಾಗಿ ಶಾಲೆಗೆ ಕೊಡುಗೆಯನ್ನು ಮುಖ್ಯೋಪಾಧ್ಯಾಯರಿಗೆ ಹಸ್ತಾಂತರ ಮಾಡಲಾಯಿತು.

ಶಿಬಿರಾರ್ಥಿಗಳಾದ ಜ್ಯೋತಿ, ಪ್ರೀತಂ ,ದೀಕ್ಷಾ ಮತ್ತಿತರರು ತಮ್ಮ ಅನುಭವಗಳನ್ನು ಹಂಚಿಕೊಂಡರು.ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಸುರೇಶ್ ಮಾತನಾಡಿ ಶಿಬಿರಾರ್ಥಿಗಳ ಶ್ರಮದಾನ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತಿತರ ಕಾರ್ಯಕ್ರಮಗಳ ಬಗ್ಗೆ ಶ್ಲಾಘನೆಯನ್ನು ವ್ಯಕ್ತಪಡಿಸಿದ್ದರು.

ಅರ್ಥಶಾಸ್ತ್ರ ಉಪನ್ಯಾಸಕಿ ಬಬಿತಾ ಸ್ವಾಗತಿಸಿದರು. ಸಹ ಶಿಬಿರ ಅಧಿಕಾರಿ ಸೌಮ್ಯ ಕಾರ್ಯಕ್ರಮ ನಿರ್ವಹಿಸಿದರು, ಸಹ ಶಿಬಿರಾಧಿಕಾರಿ ಸತೀಶ್ ವಂದಿಸಿದರು.

p>

LEAVE A REPLY

Please enter your comment!
Please enter your name here